ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 23,000 ರನ್ ಪೂರೈಸುವ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತು ರಿಕಿ ಪಾಂಟಿಂಗ್ ದಾಖಲೆಯನ್ನು ಮುರಿದಿದ್ದಾರೆ.
ಓವಲ್ ಮೈದಾನದಲ್ಲಿ ಗುರುವಾರ ಆರಂಭಗೊಂಡ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸುವ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 23,000 ರನ್ ಪೂರೈಸಿದ ದಾಖಲೆ ಬರೆದರು.
ಕೊಹ್ಲಿ 490 ಇನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದರೆ, ಸಚಿನ್ ತೆಂಡೂಲ್ಕರ್ 522 ಇನಿಂಗ್ಸ್ ಗಳಲ್ಲಿ 23 ಸಾವಿರ ರನ್ ಗಡಿ ದಾಟಿದ್ದರು. ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ 544 ಪಂದ್ಯಗಳಲ್ಲಿ ಈ ಸಾಧನೆ ಮಾಡಿ ಮೂರನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ 551, ಶ್ರೀಲಂಕಾದ ಕುಮಾರ ಸಂಗಕ್ಕಾರ 568, ರಾಹುಲ್ ದ್ರಾವಿಡ್ 576 ಪಂದ್ಯಗಳಲ್ಲಿ 23 ಸಾವಿರ ರನ್ ಬಾರಿಸಿದ್ದರು.