ಭಾರತ ( INDIA ) ಮತ್ತು ಶ್ರೀಲಂಕಾ ( SRI LANKA ) ನಡುವಿನ ಟಿ20 ಸರಣಿ ಜನವರಿ 3ರಿಂದ ಆರಂಭವಾಗಲಿದೆ. ಈ ಸರಣಿಗೂ ಮೊದಲು ಭಾರತ ತಂಡದಲ್ಲಿ ಭಾರೀ ಬದಲಾವಣೆ ಆಗಲಿದೆ.
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಪಂದ್ಯದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಬಿಸಿಸಿಐ ( BCCI ) ಮೂಲಗಳ ಪ್ರಕಾರ ವಿರಾಟ್ ಕೊಹ್ಲಿ ಟಿ20 ಪಂದ್ಯಗಳಿಗೆ ಲಭ್ಯವಿಲ್ಲ ಎಂದು ಹೇಳಲಾಗಿದೆ. ಏಕದಿನ ಸರಣಿಯಲ್ಲಿ ತಂಡಕ್ಕೆ ಮರಳಲಿದ್ದಾರೆ. ಆದರೆ, ಅವರು ಟಿ20 ಅಂತಾರಾಷ್ಟ್ರೀಯ ಪಂದ್ಯದಿಂದ ವಿರಾಮ ತೆಗೆದುಕೊಳ್ಳುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದನ್ನು ಓದಿ :- ತನ್ನ ವಿಕೆಟ್ ಪಡೆದ ಬಾಂಗ್ಲಾ ಬೌಲರ್ ಗೆ ವಿಶೇಷ ಉಡುಗೊರೆ ನೀಡಿದ ವಿರಾಟ್ ಕೊಹ್ಲಿ
ಟಿ20 ( T-20) ಅಂತಾರಾಷ್ಟ್ರೀಯ ಪಂದ್ಯದಿಂದ ವಿರಾಮ ತೆಗೆದುಕೊಳ್ಳುವ ನಿರ್ಧಾರದ ನಂತರ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ಮುಂಬರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿ ಮುಂದಿನ ವರ್ಷ ಜನವರಿ 3 ರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ವಿರಾಟ್ ಆಡಲಿದ್ದಾರೆ ಎನ್ನಲಾಗಿದೆ.
ಇದೀಗ ವಿರಾಟ್ ಕೊಹ್ಲಿ ಟಿ20 ಪಂದ್ಯದಿಂದ ವಿರಾಮ ತೆಗೆದುಕೊಳ್ಳಲು ನಿರ್ಧರಿಸುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ಇದನ್ನು ಓದಿ :- ಅಶ್ವಿನ್, ಅಯ್ಯರ್ ಭರ್ಜರಿ ಬ್ಯಾಟಿಂಗ್ – ಬಾಂಗ್ಲಾ ಸರಣಿ ಗೆದ್ದ ಭಾರತ