ಭಾರತ ಎಲ್ಲಾ ಮಾದರಿಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ವಿಶ್ವಕಪ್ ಟಿ-20 ಕ್ರಿಕೆಟ್ ಟೂರ್ನಿ ನಂತರ ಭಾರತ ಟಿ-20 ತಂಡದ ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದಾರೆ.
ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆದ್ದು ಐತಿಹಾಸಿಕ ಸಾಧನೆ ಬೆನ್ನಲ್ಲೇ ವಿರಾಟ್ ಕೊಹ್ಲಿ ಐಪಿಎಲ್ ಎರಡನೇ ಹಂತದ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುವ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.