ಹೃದಯಾಘಾತಕ್ಕೆ ಒಳಗಾಗಿದ್ದ ತಮಿಳು ಹಾಸ್ಯನಟ ವಿವೇಕ್ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.
ಗುರುವಾರ ಸರಕಾರಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದಿದ್ದ ವಿವೇಕ್ ಅವರಿಗೆ ಶುಕ್ರವಾರ ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಆಂಜಿಯೊಪ್ಲಾಸ್ಟ್ ಮಾಡಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾದ ಕಾರಣ ವಿವೇಕ್ ಶನಿವಾರ ಮುಂಜಾನೆ 4.35ಕ್ಕೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದು, ತಮಿಳು ಚಿತ್ರರಂಗದ ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ.
ವಿಜಯ್, ಕಮಲ್ ಹಾಸನ್, ರಜನಿಕಾಂತ್, ನಿರ್ದೇಶಕ ಶಂಕರ್ ಸೇರಿದಂತೆ ತಮಿಳುನಾಡಿನ ಸ್ಟಾರ್ ನಟರು, ನಿರ್ದೇಶಕರು ವಿವೇಕ್ ನಿಧನಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ.