ರಾಜಕೀಯ ದ್ವೇಷದಿಂದ ಸುಳ್ಳು ಪ್ರಕರಣ ದಾಖಲಿಸಿ ಕಾಂಗ್ರೆಸ್ (CONGRESS) ಪಕ್ಷದ ಧ್ವನಿ ಅಡಗಿಸಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ. ಇದು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ (DKSHIVAKUMAR) ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ, ಪೂರ್ವಾಧ್ಯಕ್ಷ ರಾಹುಲ್ ಗಾಂಧಿ (RAHUL GANDHI) ಹಾಗೂ ಎಐಸಿಸಿ ಕಚೇರಿ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸುತ್ತಿದೆ. ಕೇಂದ್ರ ಸರ್ಕಾರ ಪೊಲೀಸರನ್ನು ಬಳಸಿಕೊಂಡು, ನಮ್ಮ ಪಕ್ಷದ ಕಚೇರಿಗೆ ಯಾರೂ ಬರಬಾರದು, ಅಲ್ಲಿ ಯಾರೂ ಸೇರುವಂತಿಲ್ಲ ಎಂದು ದಬ್ಬಾಳಿಕೆ ನಡೆಸುತ್ತಿದೆ. ಅದನ್ನು ಖಂಡಿಸಿ ಪ್ರತಿಭಟನೆ ವ್ಯಕ್ತಪಡಿಸಲು ಇಲ್ಲಿಗೆ ಬಂದಿದ್ದೇವೆ. ಇಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದು, ಅದರ ಬಗ್ಗೆಯೂ ಅರಿವಿದೆ. ಸೂರ್ಯ ಹುಟ್ಟುತ್ತಾನೆ, ಮುಳುಗುತ್ತಾನೆ. ಅದೇ ರೀತಿ ಎಲ್ಲರಿಗೂ ರಾಜಕೀಯದಲ್ಲಿ ದಿನಗಳು ಬದಲಾಗುತ್ತವೆ. ಬಿಜೆಪಿ ಯವರು ಇದನ್ನು ಅರ್ಥ ಮಾಡಿಕೊಂಡಂತೆ ಕಾಣುತ್ತಿಲ್ಲ. ಏನೇ ಆದರೂ ನಾವು ನಮ್ಮ ನಾಯಕರ ಜತೆ ಇರುತ್ತೇವೆ, ಕಷ್ಟಕಾಲದಲ್ಲಿ ಅವರ ಜತೆ ನಿಂತು, ಅವರಿಗೆ ಧೈರ್ಯ ತುಂಬುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇವೆ ಎಂದು ತಿಳಿಸಿದ್ರು. ಇದನ್ನೂ ಓದಿ : – ಮಹಾ ವಿಕಾಸ್ ಅಘಾಡಿ ಬಿಕ್ಕಟ್ಟು- ಶಿವಸೇನೆ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಏಕನಾಥ್ ಶಿಂಧೆ ವಜಾ
ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ವಿಚಾರ
10 ಶಾಸಕರು ಸೂರತ್ ನಲ್ಲಿ ಇದ್ದಾರೆ ಎಂದು ಯಾರೋ ಕರೆ ಮಾಡಿ ಹೇಳಿದ್ದಾರೆ. ಆದರೆ ನನಗೆ ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾನು ಮಹಾರಾಷ್ಟ್ರದ ಉಸ್ತುವಾರಿಯೂ ಅಲ್ಲ. ನಾನು ಕರ್ನಾಟಕದಲ್ಲಿ ಪಕ್ಷದ ಅಧ್ಯಕ್ಷನಾಗಿದ್ದು, ರಾಜ್ಯಕ್ಕೆ ಸಂಬಂಧಿಸಿದ ವಿಚಾರ ಇದ್ದರೆ ಆ ಬಗ್ಗೆ ಮಾತ್ರ ಮಾತನಾಡುತ್ತೇನೆ ಎಂದು ಹೇಳಿದ್ರು.
ಇದನ್ನೂ ಓದಿ : – ಹೆಚ್ಚಿದ ಅತ್ಯಾಚಾರ ಪ್ರಕರಣ – ಪಂಜಾಬ್ ಪ್ರಾಂತ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಣೆ..!