ಗುಜರಾತ್ ಚುನಾವಣೆ (Gujrath election) ಸೋಲನ್ನು ನಾವು ವಿನಮ್ರವಾಗಿ ಸ್ವೀಕರಿಸುತ್ತೇವೆ. ರಾಜ್ಯದ ಜನರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul gandhi) ಹೇಳಿದ್ದಾರೆ. ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ಸೋಲನ್ನು ಕಂಡ ಬೆನ್ನಲ್ಲೇ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಮತ್ತೆ ಪಕ್ಷ ಸಂಘಟನೆ ಮಾಡುತ್ತೇವೆ ಎಂದಿದ್ದಾರೆ.
हम गुजरात के लोगों का जनादेश विनम्रतापूर्वक स्वीकार करते हैं।
हम पुनर्गठन कर, कड़ी मेहनत करेंगे और देश के आदर्शों और प्रदेशवासियों के हक़ की लड़ाई जारी रखेंगे।
— Rahul Gandhi (@RahulGandhi) December 8, 2022
ನಾವು ಕಾಂಗ್ರೆಸ್ ನ್ನು ಮರು ಸಂಘಟಿಸಲು ಶ್ರಮಿಸುತ್ತೇವೆ. ದೇಶದ ಆದರ್ಶ ಹಾಗೂ ರಾಜ್ಯದ ಜನರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಇಲ್ಲಿ 17 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಕಳೆದ ಬಾರಿಗಿಂತ 61 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಗುಜರಾತ್ ನಲ್ಲಿ ಇದು ಕಾಂಗ್ರೆಸ್ ನ ಇದುವರೆಗಿನ ಅತ್ಯಂತ ಕಳಪೆ ಸಾಧನೆಯಾಗಿದ್ದು, ಬಿಜೆಪಿ (BJP) ಎದುರು ಕೈಪಡೆ ಮಕಾಡೆ ಮಲಗಿದೆ. ಇನ್ನು, ಹಿಮಾಚಲ ಪ್ರದೇಶ (Himachal pradesh) ದಲ್ಲಿ ಕಾಂಗ್ರೆಸ್ ನಿರ್ಣಾಯಕ ಗೆಲುವು ಸಾಧಿಸಿದೆ. ಅಲ್ಲಿನ ಜನಕ್ಕೆ ರಾಹುಲ್ ಗಾಂಧಿ ಧನ್ಯವಾದ ತಿಳಿಸಿದ್ದು, ಸಾರ್ವಜನಿಕರಿಗೆ ನೀಡಿದ ಪ್ರತಿಯೊಂದು ಭರವಸೆಯನ್ನು ಶೀಘ್ರವಾಗಿ ಈಡೇರಿಸಲಾಗುವುದು ಎಂದು ಹೇಳಿದ್ದಾರೆ. ಇಲ್ಲಿ ಕಳೆದ ಬಾರಿ ಸೋಲನ್ನು ಕಂಡಿದ್ದ ಕಾಂಗ್ರೆಸ್ ಈ ಬಾರಿ 40 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿ 25 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಹಿಮಾಚಲ ಪ್ರದೇಶದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರಿಗೂ ಹೃತ್ಪೂರ್ವಕ ಅಭಿನಂದನೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ನಿಜವಾಗಿಯೂ ಈ ಗೆಲುವಿಗೆ ಅರ್ಹವಾಗಿದೆ. ಸಾರ್ವಜನಿಕರಿಗೆ ನೀಡಿದ ಪ್ರತಿಯೊಂದು ಭರವಸೆಯನ್ನು ಶೀಘ್ರವಾಗಿ ಈಡೇರಿಸಲಾಗುವುದು ಎಂದು ನಾನು ಮತ್ತೊಮ್ಮೆ ಭರವಸೆ ನೀಡುತ್ತೇನೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ .
ಇದನ್ನು ಓದಿ : – ಹಿಮಾಚಲ ಪ್ರದೇಶದಲ್ಲಿ ಮಾಧ್ಯಮ ಸರ್ವೆ ಸರಿಯಾಗಿದೆ- ಹೆಚ್. ಕೆ ಪಾಟೀಲ್