ಹಿಜಾಬ್ ವಿವಾದ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ(CJI) ವರ್ಗಾವಣೆ ಆಗಿರುವುದನ್ನು ಸ್ವಾಗತಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ( BC Nagesh ) ಹೇಳಿದ್ದಾರೆ.
ಕೋರ್ಟ್ ಆದೇಶದಂತೆ ಅಲ್ಲಿಯವರೆಗೂ ಹೈಕೋರ್ಟ್ ಆದೇಶವನ್ನು ಶಿಕ್ಷಣ ಸಂಸ್ಥೆಗಳಲ್ಲಿ ಪಾಲಿಸುತ್ತೇವೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್ ( Supreme Court ) ನ್ಯಾಯಪೀಠ ಸಿಜೆಐ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ವಿಶ್ವಾದ್ಯಂತ ಇಂದು ಮಹಿಳೆಯರು ಹಿಜಾಬ್/ಬುರ್ಖಾ ಧರಿಸಬಾರದು ಎಂದು ಒತ್ತಾಯಿಸುತ್ತಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ಕೂಡ ಅದನ್ನು ಪ್ರೋತ್ಸಾಹಿಸುತ್ತದೆ.
ಇದನ್ನೂ ಓದಿ :- ಹಿಜಾಬ್ ವಿವಾದ ವಿಸ್ತೃತ ಪೀಠಕ್ಕೆ ವರ್ಗಾವಣೆ ಆಗಿರುವುದನ್ನು ಸ್ವಾಗತಿಸುತ್ತೇವೆ- ಶಿಕ್ಷಣ ಸಚಿವ ಬಿ ಸಿ ನಾಗೇಶ್..!
ಇಂದು ಸುಪ್ರೀಂ ಕೋರ್ಟ್ ನಿಂದ ಉತ್ತಮ ತೀರ್ಪು ನಿರೀಕ್ಷಿಸಿದ್ದೆವು. ಈ ಮಧ್ಯೆ ಕರ್ನಾಟಕ ಹೈಕೋರ್ಟ್ ಆದೇಶವು ಮಧ್ಯಂತರ ಸಮಯದಲ್ಲಿ ಅನ್ವಯಿಸುತ್ತದೆ, ಅಲ್ಲಿಯವರೆಗೂ ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ನಿಯಮ ಮುಂದುವರಿಯುತ್ತದೆ, ಸುಪ್ರೀಂ ಕೋರ್ಟ್ ( Supreme Court ) ನಿಂದ ಏನೇ ತೀರ್ಪು ಬಂದರೂ ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ :- ಬಿಜೆಪಿ ಸೇರಲು ನಿರಾಕರಿಸಿದ್ದರಿಂದ ಗಂಗೂಲಿಗೆ 2ನೇ ಬಾರಿಗೆ BCCI ಸ್ಥಾನ ಕೈತಪ್ಪಿತಾ…?