ರಾಜಧಾನಿಯಲ್ಲಿ ಮಳೆಯ ಅಬ್ಬರ : ಹೈರಾಣಾದ ಜನರು

ಬೆಂಗಳೂರು : ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇಂದು ಕೂಡ ವರುಣಾನ ಅರ್ಭಟ ಹೆಚ್ಚಾಗಿದೆ. ರಾಜಧಾನಿಯಲ್ಲಿ ಸಂಜೆ ಸುರಿದ ಮಳೆಗೆ ಜನರು ಹೈರಾಣಾಗಿದ್ದಾರೆ.

ವಿಕೇಂಡ್​ ಲಾಕ್​ಡೌನ್​ ಹಿನ್ನಲೆ ಬಸ್​ಗಳ ಸಂಖ್ಯೆ ಕೂಡ ಗಣನೀಯವಾಗಿ ಕಡಿಮೆಯಾಗಿದ್ದು, ಮಳೆ ಶುರುವಾದ ಹಿನ್ನಲೆ ಜನರು ತೊಂದರೆ ಅನುಭವಿಸುವಂತಾಗಿದೆ. ಮೆಜೆಸ್ಟಿಕ್​, ಗಾಂಧಿನಗರ, ಯಶವಂತಪುರ, ದಾಸರಹಳ್ಳಿ, ರಾಜಾಜಿನಗರ, ಬಸವೇಶ್ವರನಗರ, ವಿಲ್ಸನ್​ ಗಾರ್ಡನ್​, ಶಾಂತಿ ನಗರ, ಕೋರಮಂಗಲ ಸೇರಿದಂತೆ ಹಲವೆಡೆ ಮಳೆಗೆ ಟ್ರಾಫಿಕ್​ ಸಮಸ್ಯೆ ಉಂಟಾಗಿದೆ.

ಸುಮಾರು ಅರ್ಧ ಗಂಟೆಯಿಂದ ಗುಡುಗು-ಮಿಂಚಿನಿಂದ ಕೂಡಿದ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದ ಹಲವೆಡೆ ಮಳೆ ನೀರು ನುಗ್ಗಿದೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಎದ್ದಿರುವುದರಿಂದ ನಿನ್ನೆ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದಿದ್ದು, ಬಸವನಗುಡಿ, ಜಯನಗರ, ಬನಶಂಕರಿ, ವಿಜಯನಗರ, ಯಲಹಂಕ, ಮೆಜೆಸ್ಟಿಕ್ ಸುತ್ತಮುತ್ತಲಿನ ಏರಿಯಾಗಳು ಜಲಾವೃತವಾಗಿತ್ತು.

ರಾಜ್ಯದ ಮಲೆನಾಡು ಮತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಉತ್ತರ ಒಳನಾಡು ಮತ್ತ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿತ್ತು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!