ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ತೀವ್ರವಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಜೂನ್ 13 ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಗುಡುಗು ಸಿಡಿಲು, ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಬೀದರ್, ಗದಗ, ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ಕೋಲಾರ, ದಾವಣಗೆರೆ, ಕೊಪ್ಪಳ ಜಿಲ್ಲೆಗಳಲ್ಲೂ ಮಳೆಯಾಗುವ ಸಾದ್ಯತೆ ಇದ್ದು, ಅಲ್ಲಲ್ಲಿ ರೆಟ್ ಅಲರ್ಟ್ ಘೋಷಿಸಲಾಗಿದೆ.