ನವದೆಹಲಿ: ಕೋವಿಡ್ 19 ಸೋಂಕು ಪ್ರಕರಣಗಳು ದೇಶಾದ್ಯಂತ ನಿಯಂತ್ರಣ ಮೀರುತ್ತಿವೆ. ಹೀಗಾಗಿ ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಈಗಾಗಲೇ ಕಠಿಣ ನಿರ್ಬಂಧಗಳನ್ನು ಹೇರಲಾಗಿದೆ.
ನವದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೊರೋನಾ ಸೋಂಕು ಪ್ರಕರಣಗಳು ಕಳವಳಕಾರಿಯಾಗಿದೆ. ಸೋಂಕು ನಿಯಂತ್ರಣಕ್ಕೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ನವದೆಹಲಿಯ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಉಂಟಾಗುವುದಿಲ್ಲ. ಇಲ್ಲಿನ ಆಸ್ಪತ್ರೆಗಳಲ್ಲಿ 5000 ಹೆಚ್ಚೂವರಿ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ.
ಶುಕ್ರವಾರ ರಾತ್ರಿ 10ಗಂಟೆಯಿಂದ ಸೋಮವಾರ ಬೆಳಗ್ಗೆ 6ರವರೆಗೆ ವಾರಾಂತ್ಯ ಕರ್ಫ್ಯೂ ಇರಲಿದೆ. ಈ ವೇಳೆ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶವಿರುತ್ತದೆ. ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಪಾರ್ಸಲ್ಗೆ ಮಾತ್ರ ಅವಕಾಶವಿರಲಿದೆ. ಇನ್ನು ಮದುವೆಗಳಲ್ಲಿ ಪಾಲ್ಗೊಳ್ಳಲು ಕಡ್ಡಾಯವಾಗಿ ಪಾಸ್ ಹೊಂದಿರಬೇಕೆಂದು ಅಧಿಕಾರಿಗಳು ಹೇಳಿದ್ದಾರೆ.