ನನ್ನ ಮುಲ್ಲಾ ಅಂತ ಕರೆಯೋಕ್ಕಾಗಲ್ಲ ಹಿಂದೂ ಹುಲಿ ಅಂತಾನೇ ಕರೆಯಬೇಕು – ಸಿ.ಟಿ ರವಿ

ಬಿಜೆಪಿ ನಾಯಕರ ಹೆಸರಿಗೆ ಮುಸ್ಲಿಂ ಹೆಸರನ್ನು ಹಾಕಿ ಕಾಂಗ್ರೆಸ್ ಟ್ವೀಟ್ ಮಾಡ್ತಿರೋ ವಿಚಾರಕ್ಕೆ ಸಂಬಂಧಿಸಿಸದಂತೆ ಚಿಕ್ಕಮಗಳೂರಿ ( CHIKKAMAGALURU ) ನಲ್ಲಿ ಬಿಜೆಪಿ ನಾಯಕ ಸಿ.ಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ನಾಯಕರ ಹೆಸರಿಗೆ ಮುಸ್ಲಿಂ ಹೆಸರನ್ನು ಹಾಕಿ ಕಾಂಗ್ರೆಸ್ ಟ್ವೀಟ್ ಮಾಡ್ತಿರೋ ವಿಚಾರಕ್ಕೆ ಸಂಬಂಧಿಸಿಸದಂತೆ ಚಿಕ್ಕಮಗಳೂರಿ ( CHIKKAMAGALURU ) ನಲ್ಲಿ ಬಿಜೆಪಿ ನಾಯಕ ಸಿ.ಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ನಾಯಕರ ಸ್ವಭಾವ ಹಾಗೆ ಇದ್ರೆ ಕಾಂಗ್ರೆಸ್ನ ( CONGRESS ) ವರು ಖಂಡಿತ ಕರೆಯಲಿ. ನನ್ನ ಸ್ವಭಾವ ಕುಂಕುಮ ಕಂಡರೆ ಆಗದಿದ್ರೆ, ಕೇಸರಿ ನೋಡಿದ್ರೆ ಆಗದಿದ್ರೆ, ಮುಲ್ಲಾ ಗಳ ಮೇಲೆ ಪ್ರೀತಿ ಜಾಸ್ತಿ ಇದ್ರೆ ಖಂಡಿತ ಕರೆಯಬಹುದು. ನನ್ನ ಮುಲ್ಲಾ ಅಂತ ಕರೆಯೋಕ್ಕಾಗಲ್ಲ, ಹಿಂದೂ ಹುಲಿ ಅಂತಾನೇ ಕರೆಯಬೇಕು. ನನ್ನ ಮುಲ್ಲಾ ಅಂತ ಕರೆದ್ರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ. ಸ್ವಭಾವಕ್ಕೆ ತಕ್ಕಂತೆ ಬಿರುದುಗಳು ನಮಗೆ ಬರುತ್ತದೆ. ಪರ್ಷಿಯನ್ ಭಾಷೆಯನ್ನ ಆಡಳಿತ ಭಾಷೆಯನ್ನಾಗಿ ಮಾಡಿದವನನ್ನ.

ಕನ್ನಡ ಪ್ರೇಮಿ ಅಂತ ಹೇಳಕ್ಕಾಗುತ್ತಾ.? ಹಾಗೆ ಹೇಳಿದ್ರೆ ಅದಕ್ಕಿಂತ ಅಪಪ್ರಚಾರ ಬೇರೆ ಏನಿದೆ..? ಮುಲ್ಲಾ ಅನ್ನೋ ಹೆಸರು ಯಾರಿಗೆ ಕನೆಕ್ಟ್ ಆಗುತ್ತೆ ಅಂದ್ರೆ ಶಾದಿ ಭಾಗ್ಯ, ದೇ ಆರ್ ಆಲ್ ಮೈ ಬ್ರದರ್ಸ್ ಅನ್ನೋರಿಗೆ ಕನೆಕ್ಟ್ ಆಗುತ್ತೆ. ಬೆಂಕಿ ಹಾಕಿದ್ರು ಕೂಡ ಅಮಾಯಕರು ಅನ್ನೋರಿಗೆ ಕನೆಕ್ಟ್ ಆಗುತ್ತೆ. ಕೇಸರಿ, ಕುಂಕುಮವನ್ನ ದೂಡಿ ಟೋಪಿಯನ್ನ ಪ್ರೀತಿಯಿಂದ ಹಾಕಿಕೊಳ್ಳುವವರಿಗೆ ಕನೆಕ್ಟ್ ಆಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೆಸರೇಳದೆ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ : –  ಕೊರೊನಾ ವೈರಸ್ ವುಹಾನ್ ಲ್ಯಾಬ್ ನಿಂದಲೇ ಸೋರಿಕೆ ….!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!