ತಿಂಗಳ ಹಿಂದೆ ಗಂಡ ಕೊಲೆಯಾಗಿದ್ದು ಇದರಿಂದ ಖಿನ್ನತೆಗೆ ಒಳಗಾಗಿದ್ದ ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರ ಹೊರಹೊಲಯದ ಮುಷ್ಟೂರು ಗ್ರಾಮದಲ್ಲಿ ನಡೆದಿದೆ.
ಒಂದು ತಿಂಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿ ಪತಿ ವೆಂಕಟೇಶ್ ನನ್ನು ಕೊಲೆ ಮಾಡಿದ್ದರು. ಗಂಡನ ಸಾವನ್ನು ಸಹಿಸಲಾರದೆ ಪತ್ನಿ 25 ವರ್ಷದ ಸುನೀತಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನೇಣು ಹಾಕಿಕೊಂಡಿರುವ ಬಗ್ಗೆ ತಿಳಿದ ಮನೆಯವರು ತಕ್ಷಣ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ ಅದರೆ ದುರಾದೃಷ್ಟವಶಾತ್ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಮಹಿಳೆ ಸಾವನ್ನಪ್ಪಿದ್ದಾಳೆ. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತುದ್ದು, ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.