2-3 ದಿನದಲ್ಲಿ ಲಾಕ್ ಡೌನ್ ಮುಂದುವರಿಸುವ ತೀರ್ಮಾನ: ಸಿಎಂ ಬಿಎಸ್ ವೈ

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಚರ್ಚೆ ನಡೆಸಿದ್ದು, 2-3 ದಿನದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಜೊತೆ ಸೋಮವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅಲ್ಲದೇ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವ ಕುರಿತು ಚರ್ಚೆ ನಡೆದಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಪ್ರಮಾಣ ಹೆಚ್ಚಿಸಿಕೊಳ್ಳಬೇಕು. ಐಸೋಲೇಷನ್ ಹಾಗೂ ತುರ್ತು ಚಿಕಿತ್ಸೆಗೆ ಪೂರಕ ಹಾಗೂ ತಾತ್ಕಾಲಿಕ ಆಸ್ಪತ್ರೆಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಗಳಲ್ಲಿ ಆಕ್ಸಿಜನ್ ಕೊರತೆ ನಿಗಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಕೇರ್ ಸೆಂಟರ್ ಹೆಚ್ಚಿಸಬೇಕು.  ಹೋಮ್ ಐಸೂಲೇಷನ್ ಇರುವವರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಅಗತ್ಯ ಇರುವ ಆಕ್ಸಿಜನ್ ಪೂರೈಕೆಯನ್ನು ಸಕಾಲದಲ್ಲಿ ಖಾತ್ರಿಪಡಿಸಬೇಕು ಇನ್ನಿತರ ಸಂಪನ್ಮೂಲ ಬಳಸಿಕೊಂಡು ಹೆಚ್ಚಿನ ಸೌಲಭ್ಯ ಕಲ್ಪಿಸಬೇಕು ಎಂದು ಯಡಿಯೂರಪ್ಪ ಹೇಳಿದರು.

ಪ್ರತಿದಿನವೂ ಕೋವಿಡ್ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬೇಕು. ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇದೇ ವೇಳೆ ಕಪ್ಪು ಶಿಲೀಂಧ್ರ ಸಮಸ್ಯೆ ಉಲ್ಬಣವಾಗುತ್ತಿರುವ ಬಗ್ಗೆಯೂ ತೀವ್ರ ನಿಗಾ ವಹಿಸಬೇಕು. ಬ್ಲ್ಯಾಕ್ ಫಂಗಸ್ ಹೊಸ ಕಾಯಿಲೆ ಅಲ್ಲ. ಕೆಲ ಔಷಧಗಳ ಬಳಕೆಯಿಂದ ಇದು ಉಲ್ಬಣ ಆಗುತ್ತಿದೆ. ಅದಕ್ಕೆ ಸೂಕ್ತ ಚಿಕಿತ್ಸೆಯೂ ಮಾಡಬಹುದು ಎಂದು ಅವರು ಭರವಸೆ ನೀಡಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!