ಬಿಜೆಪಿ (BJP) ಯಲ್ಲಿದ್ದರೂ ಅಕ್ಷರಶಃ ವಿರೋಧ ಪಕ್ಷದ ನಾಯಕನಾಗಿರೋ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೆ ಮರಳಿ ಕಾಂಗ್ರೆಸ್ (Congress) ಗೂಡಿಗೆ ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ವಿಶ್ವನಾಥ್ ಭೇಟಿ ಮಾಡಿರೋ ಹಿನ್ನೆಲೆಯಲ್ಲಿ ಮತ್ತೆ ವಿಶ್ವನಾಥ್ ಪಕ್ಷಾಂತರ ಮಾಡ್ತಾರಾ ಎಂಬ ಕುತೂಹಲ ಮೂಡಿದೆ. ಇದನ್ನೂ ಓದಿ : – ಶಿರಾದಲ್ಲಿ ಅಹೋರಾತ್ರಿ ಪಂಚರತ್ನ ರಥಯಾತ್ರೆ …!
H. Vishwanath announces his resignation from the post of Janata Dal (Secular), JDS Karnataka president. (File pic) pic.twitter.com/CniCO5fSDk
— ANI (@ANI) June 4, 2019
ಎಚ್. ವಿಶ್ವನಾಥ್ ಮೂರು ವರ್ಷದ ಹಿಂದೆ ಜೆಡಿಎಸ್ ತೊರೆದು ಬಿಜೆಪಿ ಸೇರಿ ಕಾಂಗ್ರೆಸ್ – ಜೆಡಿಎಸ್ ಸರ್ಕಾರ ಪತನವಾಗಲು ಪ್ರಮುಖ ಕಾರಣರಾಗಿದ್ದರು. ಬಾಂಬೆ ಟೀಂಗೆ ಒಂದರ್ಥದಲ್ಲಿ ವಿಶ್ವನಾಥ್ ಅವರೇ ಕ್ಯಾಪ್ಟನ್. ಆದರೆ ಉಪಚುನಾವಣೆಯಲ್ಲಿ ಸೋತ ಬಳಿಕ ಅವರು ಕ್ಯಾಪ್ಟನ್ಶಿಪ್ ಕಳೆದುಕೊಂಡು ಇಡೀ ಬಾಂಬೆ ಟೀಂ ಪಾಲಿಗೆ ಈಗ ಬೇಡವಾಗಿದ್ದಾರೆ.
ಇದೀಗ ಎಚ್. ವಿಶ್ವನಾಥ್ ದಿಢೀರನೆ ಹೋಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಇದರ ಹಿಂದೆ ಬೇರೆಯದ್ದೇ ರಾಜಕೀಯ ಲೆಕ್ಕಚಾರ ಇದೆ ಎನ್ನಲಾಗಿದೆ.
ಇದನ್ನೂ ಓದಿ : – ಕನ್ನಡಿಗರ ಹೋರಾಟಕ್ಕೆ ಬೆದರಿದ್ರಾ ಮಹಾ ಸಚಿವರು… ?