ಗೌರಿ-ಗಣೇಶ ಹಬ್ಬದ ನಂತರವೂ ದೇಶದಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಇಳಿಮುಖ ಕಂಡು ಬಂದಿದೆ. ಕಳೆದ 24 ಗಂಟೆಯಲ್ಲಿ 28,951 ಸೋಂಕು ಪ್ರಕರಣಗಳು ದೃಢಪಟ್ಟಿದ್ದರೆ, 338 ಮಂದಿ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,32,36,921ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 4,42,655ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 34,848 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಡಿಸ್ಚಾರ್ಜ್ ಆದವರ ಸಂಖ್ಯೆ 3,24,09,345ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 3,84,921ಕ್ಕೆ ಇಳಿಕೆಯಾಗಿದೆ.