ಪ್ರಿಯಕರನ ಸಾವಿನಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು ತಾಲ್ಲೂಕಿನ ಅರೆಹಳ್ಳಿಯಲ್ಲಿ ನಡೆದಿದೆ.
ಧನುಷ್(23), ಸುಷ್ಮಾ(22) ಮದುವೆಯಾಗ ಬೇಕಾಗಿದ್ದ ಮೃತ ದುರ್ದೈವಿಗಳು. ಧನುಷ್ ಮತ್ತು ಸುಷ್ಮಾ ಕಳೆದ 2 ವರ್ಷಗಳಿಂದ ಪ್ರೀತಿಸಿ ಮದುವೆಗೆ ಮನೆಯವರನ್ನು ಒಪ್ಪಿಸಿದ್ದರು. ಆದರೆ ಮೇ 11 ರಂದು ಧನುಷ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಮೇ 14 ರಂದು ರಾತ್ರಿ ಸುಷ್ಮಾ ವಿಷ ಸೇವಿಸಿ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ : – ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ- ವಿದ್ಯುತ್ ತಂತಿ ಹರಿದು ಬಿದ್ದು ಎರಡು ಹಸುಗಳು ಸಾವು
ತುಮಕೂರಿನ ಮಸ್ಕಲ್ ಗ್ರಾಮದ ಧನುಷ್, ಮೇ 11 ರಂದು ನೆಲಮಂಗಲದ ಕುಲಾನಹಳ್ಳಿ ಬಳಿ ಊರಿನ ಜಾತ್ರೆಗೆ ಬರುವ ವೇಳೆ ಅಪಘಾತ ನಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅರೆಹಳ್ಳಿ ಗ್ರಾಮದ ಸುಷ್ಮಾ ಈ ಸುದ್ದಿ ಕೇಳಿ ಆಘಾತಗೊಂಡಿದ್ದು, ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು.
ಅಂದಿನಿಂದ ಸುಷ್ಮಾ, ಧನುಷ್ ಸಾವಿನ ಯೋಚನೆಯಲ್ಲಿಯೇ ದುಃಖಿಸುತ್ತಿದ್ದಳು. ಈ ಹಿನ್ನೆಲೆ ಸುಷ್ಮಾ ಶನಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ. ತಕ್ಷಣ ಕುಟುಂಬಸ್ಥರು ಸುಷ್ಮಾಳನ್ನು ನಾಲ್ಕೈದು ಆಸ್ಪತ್ರೆಗೆ ಕರೆದುಕೊಂಡು ಸುತ್ತಿದ್ರೂ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಮೃತಪಟ್ಟಿದ್ದಾಳೆ.
ಇದನ್ನೂ ಓದಿ : – ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ