ನಾಯಿಯನ್ನು ವಾಕಿಂಗ್ ಕರೆದುಕೊಂಡು ಬಂದಿದ್ದ ಯುವತಿಯೊಬ್ಬಳು ಮಾಸ್ಕ್ ವಿಷಯಕ್ಕೆ ಯುವತಿ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದೂ ಅಲ್ಲದೇ ಪ್ರಶ್ನಿಸಿದ ಸಾರ್ವಜನಿಕರ ಮೇಲೂ ಮುಗಿಬಿದ್ದು ಹುಚ್ಚಾಟಕ್ಕಿಳಿದ ಘಟನೆ ಬೆಂಗಳೂರಿನ ಸದಾಶಿವನಗರದಲ್ಲಿ ನಡೆದಿದೆ.
ನಾಯಿಯನ್ನು ವಾಕಿಂಗ್ ಕರೆದುಕೊಂಡು ಬರುತ್ತಿದ್ದ ಯುವತಿ ಎದುರಿನಿಂದ ಬಂದ ಯುವತಿಯೊಬ್ಬಳು ಮೂಗಿನ ಕೆಳಗೆ ಮಾಸ್ಕ್ ಹಾಕಿದ್ದಾಳೆ ಎಂದು ನಾಯಿ ಹೊಡೆಯಲು ತಂದಿದ್ದ ದೊಣ್ಣೆಯಿಂದ ಯುವತಿ ಮೇಲೆ ಹಲ್ಲೆ ಮಾಡಿದ್ದಾಳೆ.
ಯುವತಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದರಿಂದ ವಾಕಿಂಗ್ ಬಂದಿದ್ದ ಸ್ಥಳೀಯರು ಪ್ರಶ್ನಿಸಿದಾಗ ಅವರ ಮೇಲೂ ಹಲ್ಲೆಗೆ ಮುಂದಾಗಿದ್ದಾಳೆ. ಈ ಸಂದರ್ಭದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮುನ್ನವೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ.
ನಾಯಿ ಸಮೇತ, ಸಾರ್ವಜನಿಕರ ಮೇಲೆ ಹಲ್ಲೆ ಮಾಡಿದ ಯುವತಿಯನ್ನು ಪೊಲೀಸರು ಜೀಪ್ ಹತ್ತಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.