ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ನ್ಯೂಜಿಲೆಂಡ್ ತಂಡ ಪ್ರಕಟಿಸಲಾಗಿದ್ದು, ಗಾಯದಿಂದ ಚೇತರಿಸಿಕೊಂಡ ಆಪದ್ಭಾಂದವ ಕೇನ್ ವಿಲಿಯಮ್ಸನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ನ್ಯೂಜಿಲೆಂಡ್ ಕ್ರಿಕೆಟ್ ಮಂಗಳವಾರ ಸೌಥ್ ಹ್ಯಾಂಪ್ಟನ್ ನಲ್ಲಿ ಜೂನ್ 18ರಿಂದ ನಡೆಯಲಿರುವ ಭಾರತ ವಿರುದ್ಧದ ಮಹತ್ವದ ಪಂದ್ಯಕ್ಕೆ 15 ಆಟಗಾರರ ತಂಡವನ್ನು ಪ್ರಕಟಿಸಿತು. ಗಾಯದ ಕಾರಣ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಕೇನ್ ವಿಲಿಯಮ್ಸನ್ ತಂಡವನ್ನು ಮುನ್ನಡೆಸಲು ಮರಳಿದ್ದಾರೆ.
ಸ್ಪಿನ್ ಆಲ್ ರೌಂಡರ್ ಅಜಾಜ್ ಪಟೇಲ್, ವಿಕೆಟ್ ಕೀಪರ್ ವಾಟ್ಲಿಂಗ್, ಹೆನ್ರಿ ನಿಕೊಲಸ್, ಟಾಮ್ ಲಾಥಮ್, ಡೆವೊನ್ ಕನ್ ವೇ ಸ್ಥಾನ ಪಡೆದಿದ್ದರೆ, ಇಂಗ್ಲೆಂಡ್ ಸರಣಿಯಲ್ಲಿ ಆಡಿದ್ದ ಮಿಚೆಲ್ ಸ್ನಾಂಟ್ನರ್, ಡ್ರೈಲ್ ಮಿಚೆಲ್ ಸ್ಥಾನ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.
ನ್ಯೂಜಿಲೆಂಡ್ ತಂಡ:
ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಂಡೆಲ್, ಟ್ರೆಂಟ್ ಬೌಲ್ಟ್, ಡೆವೊನ್ ಕಾನ್ ವೇ, ಕಾಲಿನ್ ಡೆ ಗ್ರ್ಯಾಂಡ್ ಹೋಮ್, ಮ್ಯಾಟ್ ಹೆನ್ರಿ, ಕೈಲಿ ಜಾಮಿನ್ಸನ್, ಟಾಮ್ ಲಾಥಮ್, ಹೆನ್ರಿ ನಿಕೊಲಸ್, ಅಜಾಜ್ ಪಟೇಲ್, ಟಿಮ್ ಸೌಥಿ, ರಾಸ್ ಟೇಲರ್, ನೀಲ್ ವ್ಯಾಗ್ನರ್, ಬಿಜೆ ವಾಟ್ಲಿಂಗ್, ವಿಲ್ ಯಂಗ್.