Home

ಬೆಂಗಳೂರಿನ ವಿವಿ ಹಾಸ್ಟೆಲ್ ನಲ್ಲಿ ಮತ್ತೆ ಊಟದಲ್ಲಿ ಹುಳು ಪತ್ತೆ…

ಬೆಂಗಳೂರು : ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿ ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ ಊಟದಲ್ಲಿ ಹುಳ ಪತ್ತೆಯಾಗಿದೆ. ಈ ಬಾರಿ ವಿದ್ಯಾರ್ಥಿಗಳು “ಕಟ್ಟುಪಾಡು ಬದಲಾಗದು” ಎಂಬ ಶೀರ್ಷಿಕೆಯಡಿ ಕವನದ ಮೂಲಕ ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳು ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ವಸತಿ ಶಾಲೆಯ ಊಟದಲ್ಲಿ ಹುಳಗಳು ಪತ್ತೆಯಾಗಿದ್ದು, ಕಳಪೆ ಆಹಾರ ತಿಂದು ವಿದ್ಯಾರ್ಥಿಗಳ ಆರೋಗ್ಯ ಏರುಪೇರಾಗಿದೆ. ಊಟದಲ್ಲಿ ಹುಳ ಇದೆ ಎಂದರೆ ಹಾಸ್ಟೆಲ್ ವಾರ್ಡನ್ ಅಡ್ಜೆಸ್ಟ್ ಮಾಡಿ ಎಂಬ ಅಸಡ್ಡೆಯ ನಿರ್ಲಕ್ಷ್ಯತನದ ಉತ್ತರ ನೀಡುತ್ತಿದ್ದಾರೆ. ಇದರಿಂದ ಬೇಸತ್ತ ವಿದ್ಯಾರ್ಥಿಗಳು ಕಟ್ಟುಪಾಡು ಬದಲಾಗದು ಎಂಬ ಶೀರ್ಷಿಕೆಯಡಿ ಕವನ ಬರೆದಿದ್ದು, ಬದಲಿಸಲು ಮುಂದೆ ಬಂದರೆ ಎತ್ತಂಗಡಿ ಕಟ್ಟಿಟ್ಟ ಬುತ್ತಿ ಎಂದು ಕವನದಲ್ಲಿ ಉಲ್ಲೇಖಿಸಲಾಗಿದೆ.

ಕಳಪೆ ಆಹಾರ ನೀಡುತ್ತಿರುವುದರಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶಿಸಿದರು. ಆದ್ದರಿಂದ ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ. ಊಟ, ನೀರು ಸರಿಯಿಲ್ಲ, ಉತ್ತಮ ಊಟ ನೀಡುತ್ತಿಲ್ಲ. ಇದನ್ನು ಪ್ರಶ್ನಿಸಿದರೆ ದಬ್ಬಾಳಿಕೆ ಮಾಡುತ್ತಾರೆ. ಗೊತ್ತಿಲ್ಲದೆ ಊಟದಲ್ಲಿ ಹುಳಗಳು ತಿಂದು ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂತಹ ಆಹಾರ ತಿಂದು ಜೀವಕ್ಕೆ ಅಪಾಯವಾದರೆ ಯಾರು ಹೊಣೆ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!