ಒಲಿಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಏಕೈಕ ಕುಸ್ತಿಪಟು ಎನಿಸಿಕೊಂಡಿರುವ ಸುಶೀಲ್ ಕುಮಾರ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದು, ಅವರ ಮಾಹಿತಿ ನೀಡಿದರೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ.
ಇತ್ತೀಚೆಗೆ ದೆಹಲಿಯ ಪಾರ್ಕಿಂಗ್ ವೇಳೆ ನಡೆದ ಕುಸ್ತಿಪಟುಗಳ ಹೊಡೆದಾಟದಲ್ಲಿ ಯುವ ಕುಸ್ತಿಪಟುವಿನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಶೀಲ್ ಕುಮಾರ್ ಹೆಸರು ಕೇಳಿ ಬರುತ್ತಿದ್ದಂತೆ ಅವರು ತಲೆ ಮರೆಸಿಕೊಂಡಿದ್ದಾರೆ.
ಸುಶೀಲ್ ಕುಮಾರ್ ಬಂಧನಕ್ಕೆ ದೆಹಲಿ ಪೊಲೀಸರು ಬಲೆ ಬೀಸಿದ್ದು ಇದುವರೆಗೂ ಪತ್ತೆಯಾಗಿಲ್ಲ. ಇದೇ ವೇಳೆ ಮತ್ತೊಬ್ಬ ಆರೋಪಿ ಅಜಯ್ ಎಂಬಾತ ಕೂಡ ತಲೆ ಮರೆಸಿಕೊಂಡಿದ್ದು, ಈತನನ್ನು ಹುಡುಕಿಕೊಟ್ಟರೆ 50 ಸಾವಿರ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
23 ವರ್ಷದ ಸಾಗರ್ ರಾಣಾ ಹತ್ಯೆ ಪ್ರಕರಣದಲ್ಲಿ ದೆಹಲಿ ಪೊಲೀಸರು ಸುಶೀಲ್ ಕುಮಾರ್ ಸೇರಿದಂತೆ ಇಬ್ಬರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದಾರೆ. ಆದರೆ ಘಟನೆ ಮಾರನೇ ದಿನ ಸುಶೀಲ್ ಕುಮಾರ್ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.