ಭಾರತ ಮತ್ತು ನ್ಯೂಜಿಲೆಂಡ್ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಮೊದಲ ದಿನದ ಮೊದಲ ಅವಧಿಯ ಆಟ ಮಳೆಯಿಂದ ರದ್ದುಗೊಂಡಿದೆ.
ಸೌಥ್ ಹ್ಯಾಂಪ್ಟನ್ ಮೈದಾನದಲ್ಲಿ ಶುಕ್ರವಾರದಿಂದ ಫೈನಲ್ ಪಂದ್ಯ ಆರಂಭವಾಗಬೇಕಿತ್ತು. ಆದರೆ ಸತತವಾಗಿ ಸುರಿದ ಮಳೆಯಿಂದಾಗಿ ಅಂಪೈರ್ ಗಳು ಮೊದಲ ಅವಧಿಯ ಆಟವನ್ನು ರದ್ದುಪಡಿಸಲು ನಿರ್ಧರಿಸಿದರು.
ಸೌಥ್ ಹ್ಯಾಂಪ್ಟನ್ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಮೊದಲ ದಿನದ ಆಟ ನಡೆಯುವುದು ಅನುಮಾನವಾಗಿದೆ. ಈ ಮೂಲಕ ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ.