ಅಕ್ರಮ ಮರಳು ಸಂಗ್ರಹದ ಅಡ್ಡೆಯ ಮೇಲೆ ದಾಳಿ: 1500 ಟಿಪ್ಪರ್ ನಷ್ಟು ಮರಳನ್ನು ವಶಕ್ಕೆ
ಯಾದಗಿರಿ: ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟಿದ್ದ ಅಡ್ಡೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ 1500 ಟಿಪ್ಪರ್ ನಷ್ಟು ಮರಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ಸುರಪುರ ತಹಶಿಲ್ದಾರ ಸುಬ್ಬಣ್ಣ ಜಮಖಂಡಿ ನೇತೃತ್ವದಲ್ಲಿ ಅಧಿಕಾರಿಗಳು ಅಕ್ರಮ ಮರಳು ಸಂಗ್ರಹಣೆ ಮಾಡಿದ ಅಡ್ಡೆ ಮೇಲೆ ದಾಳಿ ಮಾಡಿ ಸ್ಥಳದಲ್ಲಿದ್ದ ಮರಳುನ್ನು ಜಪ್ತಿ ಮಾಡಿದ್ದಾರೆ. ಭಾನುವಾರ ಬೆಳ್ಳಂ ಬೆಳಿಗ್ಗೆ ದಾಳಿ ಮಾಡಿದ ಅಧಿಕಾರಿಗಳು 10 ವಿಲ್ ನ 1500 ಟಿಪ್ಪರ್ ನಷ್ಟು ಮರಳನ್ನು ವಶಕ್ಕೆ ಪಡೆದುಕೊಂಡಿದ್ದು, ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.