ಅನೇಕ ಸಂದರ್ಶನಗಳಲ್ಲಿ ಯಶ್, ‘ನನ್ನ ಗುರಿ ಬೇರೆ. ನಾನು ತಲುಪಬೇಕಿರುವ ಕೇಂದ್ರಸ್ಥಾನ ಬೇರೆ’ ಎನ್ನುವ ಅರ್ಥದಲ್ಲಿ ಅನೇಕ ಬಾರಿ ಮಾತಾಡಿದ್ದೂ ಇದೆ.
ಹಾಗಾಗಿ ಯಶ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಮಾತು ಮುನ್ನೆಲೆಗೆ ಬಂದಿದೆ. ಅದಕ್ಕೆ ಪೂರಕ ಎನ್ನುವಂತೆ ಯಶ್ ನಿನ್ನೆಷ್ಟೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿ ಮಾಡಿದ್ದಾರೆ. ಇದನ್ನೂ ಓದಿ :- ನಿಲ್ಲದ ರಾಕಿಭಾಯ್ ಆರ್ಭಟ – 400 ಕೋಟಿಯತ್ತ KGF-2
ಸದ್ಯ ಯಶ್ ಮತ್ತು ರಾಧಿಕಾ ಪಂಡಿತ್ ಗೋವಾದಲ್ಲೇ ಇದ್ದು, ಪಣಜಿಯಲ್ಲಿ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಈ ಹಿಂದೆ ಯಶ್ ಹಲವಾರು ರಾಜಕೀಯ ಮುಖಂಡರ ಜತೆ ಗುರುತಿಸಿಕೊಂಡಿದ್ದೂ ಇದೆ. ಸುಮಲತಾ ಅಂಬರೀಶ್ ಅವರು ಮಂಡ್ಯ ಕ್ಷೇತ್ರದಲ್ಲಿ ಚುನಾವಣೆಗೆ ನಿಂತಾಗ, ಅವರ ಪರ ಪ್ರಚಾರ ಮಾಡಿದ್ದಾರೆ.
ಕಾಂಗ್ರೆಸ್ ಮುಖಂಡ ಎಂ.ಬಿ. ಪಾಟೀಲ್ ಅವರ ಜೊತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹತ್ತಾರು ಯೋಜನೆಗಳಿಗೆ ಕೈ ಜೋಡಿಸಿದ್ದಾರೆ.
ಇದನ್ನೂ ಓದಿ :- KGF ಆರ್ಭಟಕ್ಕೆ ಹಿಂದಿಯ ಹಳೆಯ ದಾಖಲೆಗಳೆಲ್ಲ ಧೂಳಿಪಟ- ಒಟ್ಟು 720 ಕೋಟಿ ರೂ. ಕಲೆಕ್ಷನ್!