ಸಾರಿಗೆ ನೌಕರರ ಪರ ನಿಂತ ಯಶ್ : ಯಶ್​ ಬರೆದ ಪತ್ರದಲ್ಲೇನಿದೆ?

ಬೆಂಗಳೂರು: ಸಾರಿಗೆ ನೌಕರರು ಆರನೇ ವೇತನ ಆಯೋಗ ಜಾರಿ ಮಾಡುವಚಿತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದಿಗೆ ಆ ಪ್ರತಿಭಟನೆ ಎಚಿಟು ದಿನಕ್ಕೆ ಕಾಲಿಟ್ಟಿದೆ. ನಿನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಪತ್ರವೊಂದು ವೈರಲ್ ಆಗಿತ್ತು. ನಟ ಯಶ್ ಅವರ ಬೆಂಬಲ ಕೋರಿ ನೌಕರರು ಪತ್ರ ಬರೆದಿದ್ದಾರೆ ಎನ್ನಲಾದ ಪತ್ರವದು.

ಯಶ್ ತಂದೆ ಕೂಡ ಬಿಎಚಿಟಿಸಿ ನಿವೃತ್ತ ಚಾಲಕರಾಗಿದ್ದ ಕಾರಣ ನಟ ಯಶ್ ಅವರಿಗೆ ನೌಕರರು ಮನವಿ ಮಾಡಿದ್ದರು ಎನ್ನಲಾಗಿದೆ. ಇದೀಗ ಯಶ್ ನೌಕರರ ಬೆಂಬಲಕ್ಕೆ ನಿಂತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ನಟ ಯಶ್ ಪತ್ರದ ಮೂಲಕ ತಿಳಿಸಿದ್ದಾರೆ.

ಯಶ್ ಬರೆದ ಪತ್ರದಲ್ಲೇನಿದೆ..?

ಇಂದು ನಿಮ್ಮ ಯಶ್ ಏನೇ ಆಗಿರಬಹುದು. ಅದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ. ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿ ಬರೋ ಪ್ರಯಾಣಿಕರಿಗೆ ಟ್ರೈನ್ ಮಿಸ್ ಆಗುತ್ತೇನೋ, ಆಫೀಸ್ ಗೆ ಲೇಟ್ ಆಗುತ್ತೇನೋ.ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೆ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ. ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ. ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸಿಬ್ಬಂದಿಯ ದಿನಚರಿ ಹೀಗೆ ಇರುತ್ತೆ. ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿದೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯ ವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವೂ ನಾನು ಹತ್ತಿರದಿಂದ ಬಲ್ಲವನು. ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿದೆ. ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!