ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಐಸೋಲೇಷನ್ ಗೆ ಒಳಗಾಗಿದ್ದಾರೆ.
ಅಧಿಕಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆಯಷ್ಟೇ ಐಸೋಲೇಷನ್ ಗೆ ಒಳಗಾಗಿದ್ದ ಯೋಗಿ ಆದಿತ್ಯನಾಥ್, ಬುಧವಾರ ತಮಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಘೋಷಿಸಿಕೊಂಡರು.
48 ವರ್ಷದ ಯೋಗಿ ಆದಿತ್ಯನಾಥ್ ತಮ್ಮ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅವರು ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.