ರಾಜ್ಯಪಾಲ ಹುದ್ದೆ ಸೇರಿದಂತೆ ಪಕ್ಷದಲ್ಲಿ ಉನ್ನತ ಸ್ಥಾನ ಕೊಡಿಸುವುದಾಗಿ ಗಣ್ಯರಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಯುವರಾಜ್ ಸ್ವಾಮಿ ಪ್ರಕರಣ ದೊಡ್ಡ ತಿರುವು ಪಡೆದಿದ್ದು, ಜೈಲಿನಿಂದಲೇ ಹಲವು ರಾಜಕಾರಣಿಗಳಿಗೆ ದೂರವಾಣಿ ಕರೆ ಮಾಡಿರುವುದು ಬೆಳಕಿಗೆ ಬಂದಿದೆ.
ಯುವರಾಜ್ ಸ್ವಾಮಿ ಜೈಲಿನಿಂದಲೇ ನನಗೆ ಕರೆ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ್ ಬೆಲ್ಲದ್ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ಆರಂಭಿಸಿದ್ದು, ಯುವರಾಜ್ ಜೈಲಿನಲ್ಲಿದ್ದರೂ ಸಹಾಯಕ್ಕಾಗಿ ಹಲವು ರಾಜಕಾರಣಿಗಳಿಗೆ ಕರೆ ಮಾಡಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ.
ಎಸಿಪಿ ಯತಿರಾಜ್ ಸುಮಾರು ಒಂದೂವರೆ ಗಂಟೆಗಳ ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಯುವರಾಜ್ ಸ್ವಾಮಿಯನ್ನು ವಿಚಾರಣೆಗೊಳಪಡಿಸಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾಗಲೂ ಅರವಿಂದ್ ಬೆಲ್ಲದ್ ಅವರಿಗೆ ಮಾತ್ರವಲ್ಲದೇ ಹಲವರಿಗೆ ದೂರವಾಣಿ ಕರೆ ಮಾಡಿರುವುದು ತಿಳಿದು ಬಂದಿದೆ.