ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕು ಪ್ರಕರಣಗಳು ತಲ್ಲಣ ಸೃಷ್ಟಿಸುತ್ತಿವೆ. ಮಹಾರಾಷ್ಟ್ರ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಸಾಕಷ್ಟು ಕಠಿಣ ಮಾರ್ಗಸೂಚಿಗಳನ್ನು ಹೊರಡಿಸುತ್ತಿದೆ. ಅಲ್ಲದೇ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಲಾಕ್ಡೌನ್, ನೈಟ್ ಕರ್ಫ್ಯೂ ವಿಧಿಸಲಾಗುತ್ತಿದೆ.
ಈಗ ಕೊರೋನಾ ಸೋಂಕು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 8ರಬಳಿಕ ಸ್ವಿಗ್ಗಿ ಮತ್ತು ಜೊಮ್ಯಾಟೋ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸರ್ಕಾರ ಆದೇಶಿಸಿದೆ.
ಅದೇ ರೀತಿ ಎಲ್ಲಾ ಮಾಲ್ ಗಳು ರಾತ್ರಿ 8 ರಿಂದ ಬೆಳಿಗ್ಗೆ 7 ರವರೆಗೆ ಬಂದ್ ಮಾಡಲು ಮುಖ್ಯಮಂತ್ರಿ ಕಚೇರಿ ಆದೇಶ ಹೊರಡಿಸಿದೆ. ಇನ್ನು ಕೊರೊನಾ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ಜನರು ಸರಳವಾಗಿ ಯುಗಾದಿ ಹಬ್ಬವನ್ನು ಆಚರಿಸಬೇಕು ಮತ್ತು ಜನಸಂದಣಿಯನ್ನು ತಪ್ಪಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಪ್ರತಿನಿತ್ಯ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದೆ. ಕಳೆದ 24 ಗಂಟೆಗಳಲ್ಲೇ 47288 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.