ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್ ಮುಖಂಡ ಎಂ. ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಆರ್ ಜಾಲಪ್ಪ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ತಮ್ಮ ಆಪ್ತರೂ ಆಗಿದ್ದ ಹತ್ಯೆಗೀಡಾದ ಶ್ರೀನಿವಾಸನ್ ಕುಟುಂಬದವರಿಗೆ ಸಾಂತ್ವನ ಹೇಳಿದರು. ಪರಮೇಶ್ವರ್ ಜತೆಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ , ಶಾಸಕರಾದ ಎಸ್.ಎನ್. ನಾರಾಯಣಸ್ವಾಮಿ, ಸಮೃದ್ಧಿ ಮಂಜುನಾಥ್, ಅನಿಲ್ ಕುಮಾರ್ ಇದ್ದರು. ಹತ್ಯೆಗೀಡಾದ ಶ್ರೀನಿವಾಸ್ ಅವರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರೂ ಆಗಿದ್ದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶ್ರೀನಿವಾಸ್ ಅವರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು. ಜನಮನ್ನಣೆ ಗಳಿಸಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶೀಫ್ರದಲ್ಲೇ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.