ಬಳ್ಳಾರಿಯ ವಿಜಯನಗರದಲ್ಲಿ ಅಂಬ್ಯುಲೆನ್ಸ್ ನಲ್ಲಿ ಅವಳಿ ಮಕ್ಕಳಿಗೆ ಮಹಿಳೆಯೊಬ್ಬರು ಜನ್ಮ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಕಮಲಾಪುರ ಆಸ್ಪತ್ರೆಯ 108 ಸಿಬ್ಬಂದಿ ಹೆರಿಗೆ ಮಾಡಿಸಿದ್ದಾರೆ. ಹೊಸಪೇಟೆ ತಾಲೂಕಿನ ಕೋಟಗಿನಾಳ್ ಗ್ರಾಮದ ಶಶಿಕಲಾ ಎಂಬ ಮಹಿಳೆ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿಯಾಗಿದ್ದಾರೆ. ಒಂದು ಗಂಡು ಮತ್ತೊಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ತಾಯಿ ಮಕ್ಕಳಿಬ್ರೂ ಆರೋಗ್ಯವಾಗಿದ್ದು, ಗಾದಿಗನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 108 ಚಾಲಕನ ಸಮಯಪ್ರಜ್ಞೆಯಿಂದ ಸೂಸೂತ್ರ ಹೆರಿಗೆ ನಡೆದಿದೆ.
0 249 Less than a minute