ಕರ್ನಾಟಕ ( KARNATKA ) cpngress
ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಹುಬ್ಬಳ್ಳಿ ( HUBALLI ) ಸೆಂಟ್ರಲ್ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ನಡುವೆ ಪೈಪೋಟಿ ನಡೆಯಲು ಆರಂಭವಾಗಿದೆ. ತಮ್ಮ ನಾಯಕರಿಗೆ ಟಿಕೆಟ್ ಕೊಡುವಂತೆ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕಿತ್ತಾಟ ನಡೆದಿದೆ. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದ ರಜತ್ ಉಳ್ಳಾಗಡ್ಡಿಮಠ ಮತ್ತು ಅನಿಲಕುಮಾರ್ ಪಾಟೀಲ್ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ತನ್ನ ನಾಯಕರ ಪರ ಜಯಘೋಷಗಳನ್ನು ಕೂಗಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಕುರಿತು ಹುಬ್ಬಳ್ಳಿಯ ಕಾರವಾರ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ನಿನ್ನೆ ಸಂಜೆ ಸಭೆ ನಡೆಸಲಾಯಿತು. ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ, ಗ್ರಾಮೀಣ ಜಿಲ್ಲಾ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ಮತ್ತು ಪ್ರಕ್ರಿಯೆ ನಡೆಯಿತು. ಕಾಂಗ್ರೆಸ್ ನ ಹಿರಿಯ ಮುಖಂಡರು ಸಂದರ್ಶನದ ರೀತಿಯಲ್ಲಿ ಕೆಪಿಸಿಸಿಗೆ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದ ಆಕಾಂಕ್ಷಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಇದನ್ನು ಓದಿ : – ಅಮೆರಿಕದಲ್ಲಿ ಶತಮಾನದ ಭೀಕರ ಹಿಮಪಾತ- 50 ಮಂದಿ ಸಾವು
ರಜತ್ ಉಳ್ಳಾಗಡ್ಡಿಮಠ ಮತ್ತು ಅನಿಲಕುಮಾರ್ ಪಾಟೀಲ್ ಕೆಪಿಸಿಸಿಗೆ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಸಭೆಯಲ್ಲಿ ಬೆಂಬಲಿಗ ಕಾರ್ಯಕರ್ತರ ದಂಡೇ ಆಗಮಿಸಿತ್ತು. ಟಿಕೆಟ್ ಆಕಾಂಕ್ಷಿಗಳು ತಮ್ಮ ಹತ್ತಾರು ಬೆಂಬಲಿಗರೊಂದಿಗೆ ಬಂದು ಶಕ್ತಿಪ್ರದರ್ಶನ ಮಾಡಿದರು. ಇದೇ ವೇಳೆ ಕಾಂಗ್ರೆಸ್ ಕಚೇರಿಯಲ್ಲಿ ಆಕಾಂಕ್ಷಿಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿಯೂ ನಡೆಯಿತು.
ಇದನ್ನು ಓದಿ : – ಸಿಎಂ ಕೊಟ್ಟ ಮಾತು ತಪ್ಪಿದ್ರೆ ನಾನು ಏಕಾಂಗಿಯಾಗಿ ಹೋರಾಟ ಮಾಡ್ತೇನೆ – ಜಯ ಮೃತ್ಯುಂಜಯ ಸ್ವಾಮೀಜಿ