Life Style

ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ..!

ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ. ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ದೇಶಾದ್ಯಂತ ಆಚರಣೆ ಮಾಡಲಾಗುತ್ತದೆ.ಈ ದಿನದಂದು ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ.

ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ಹೆಣ್ಣುಗೆ ಸಮಾನ ಅವಕಾಶ ಹಾಗೂ ಪ್ರೋತ್ಸಾಹ ನೀಡಬೇಕು ಎನ್ನುವ ಉದ್ದೇಶದಿಂದ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಣೆ ಮಾಡಲಾಗುತ್ತದೆ.

ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಇತಿಹಾಸ..

ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ವನ್ನು ಆಚರಣೆ ಮಾಡಲಾಗುತ್ತದೆ. ರಾಷ್ಟ್ರೀಯ ಹೆಣ್ಣುಮಕ್ಕಳ ದಿನವನ್ನು ಮೊದಲ ಬಾರಿಗೆ 2008 ರಲ್ಲಿ ಆಚರಣೆ ಮಾಡಲಾಯಿತು. ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಮತ್ತು ಕೇಂದ್ರ ಸರ್ಕಾರದಿಂದ ಈ ದಿನ ಆಚರಣೆಯನ್ನು ಆರಂಭಿಸಲಾಯಿತು.

ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಆಚರಣೆಯ ಉದ್ದೇಶ..

ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಅವಕಾಶಗಳನ್ನು ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಸಮಾಜದಲ್ಲಿ ಅನುಭವಿಸುವ ತೊಂದರೆಗಳ ಬಗ್ಗೆ ಅರಿವು ಮೂಡಿಸುವುದು. ಸ್ತ್ರೀಯರ ಶಿಕ್ಷಣದ ಮಹತ್ವ, ಮಹಿಳೆಯರ ಆರೋಗ್ಯ ಮತ್ತು ಪೋಷಣೆಯ ಪ್ರಾಮುಖ್ಯತೆಯನ್ನು ಉತ್ತೇಜಿಸುವುದು ಈ ದಿನ ಆಚರಣೆಯ ಮೂಲ ಉದ್ದೇಶವಾಗಿದೆ.

ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಆಚರಣೆ ಹೇಗೆ?

ರಾಷ್ಟ್ರೀಯ ಹೆಣ್ಣುಮಕ್ಕಳ ದಿನವನ್ನು ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಆಚರಣೆ ಮಾಡಲಾಗುತ್ತದೆ. ಈ ದಿನದಂದು ಲಿಂಗ ಅನುಪಾತ, ಹೆಣ್ಣು ಮಕ್ಕಳ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣವನ್ನು ನಿರ್ಮಿಸುವುದು, ಹೆಣ್ಣು ಮಗುವನ್ನು ಉಳಿಸುವುದು, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದರ ಕುರಿತು ಜಾಗೃತಿ ಅಭಿಯಾನಗಳನ್ನು ಮಾಡಲಾಗುತ್ತದೆ.

ಆಚರಣೆ ಧ್ಯೇಯಗಳು..

1.ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುವ ಎಲ್ಲ ತಾರತಮ್ಯವನ್ನು ತೊಡೆದು ಹಾಕುವುದು.
2.ಸಮಾಜದಲ್ಲಿ ಹೆಣ್ಣು ಮಗುವಿಗೆ ದೊರೆಯಬೇಕಿರುವ ಗೌರವ ಮತ್ತು ಮೌಲ್ಯವನ್ನು ಖಾತ್ರಿಗೊಳಿಸುವುದು.
3.ದೇಶದಲ್ಲಿ ಇತರರಂರೆ ಹೆಣ್ಣು ಮಗುವಿಗೂ ಎಲ್ಲ ಮೂಲಭೂತ ಹಕ್ಕುಗಳು ದೊರೆಯುಂತೆ ಮಾಡುವುದು.
4.ಸಮಾಜದಲ್ಲಿ ಹೆಣ್ಣು ಮಗುವಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು ಮತ್ತು ಹೆಣ್ಣು ಮಗುವಿನತ್ತ ಸಮಾಜದ ದೃಷ್ಟಿಕೋನ ಬದಲಿಸುವುದು.
5.ಭಾರತೀಯ ಜನರಲ್ಲಿ ಲಿಂಗಸಮಾನತೆಯ ಜಾಗೃತಿ ಉಂಟು ಮಾಡುವುದು.
6.ಭಾರತದಲ್ಲಿ ಹೆಣ್ಣು ಮಗುವಿನ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!