ದಕ್ಷಿಣ ಭಾರತದ ಸ್ಟಾರ್ ನಟಿಯರಲ್ಲಿ ಒಬ್ಬರಾಗಿರುವ ಹನ್ಸಿಕಾ ಮೋಟ್ವಾನಿ ( HANSIKA MOTVANI ) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಬಿಸಿನೆಸ್ ಮ್ಯಾನ್ ಸೊಹೈಲ್ ಜೊತೆ ಹಸೆಮಣೆ ಏರಲು ರೆಡಿಯಾಗಿದ್ದಾರೆ.
ಸದ್ಯ ಈ ಜೋಡಿ ಪ್ರೀ ವೆಡ್ಡಿಂಗ್ ಶೂಟ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಬಾಲನಟಿಯಾಗಿ ಎಂಟ್ರಿ ಕೊಟ್ಟು, ಬಹುಭಾಷೆಗಳಲ್ಲಿ ನಾಯಕಿಯಾಗಿ ಮಿಂಚಿದ ಹನ್ಸಿಕಾ ಮೋಟ್ವಾನಿ ಉದ್ಯಮಿ ಸೊಹೈಲ್ ಕಥುರಿಯಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಸದ್ಯ ಪ್ರೀ ವೆಡ್ಡಿಂಗ್ ಶೂಟ್ ಸಂಭ್ರಮದಲ್ಲಿ ಈ ಜೋಡಿ ಮಿಂಚಿದ್ದಾರೆ. ಡಿಸೆಂಬರ್ ಮೊದಲ ವಾರದಲ್ಲಿ ಮದುವೆ ನಡೆಯಲಿದೆ. ನಟಿ ರೆಡ್ ಕಲರ್ ಸ್ಯಾರಿಯಲ್ಲಿ ಕಾಣಿಸಿಕೊಂಡರೆ, ಸೊಹೈಲ್ ರೆಡ್ ಕಲರ್ ಕುರ್ತಾದಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ನೋಡಿದ್ದಾರೆ.
ಇದನ್ನೂ ಓದಿ : – ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಕ್ಷಮೆ ಕೇಳಿದ ಕುಮಾರಸ್ವಾಮಿ