ಗೆಳೆಯನ ಚೊಚ್ಚಲ ನಿರ್ದೇಶನದ ಚಿತ್ರದ ಶೀರ್ಷಿಕೆ ಅನಾವರಣಗೊಳಿಸುವ ಮೂಲಕ ಶುಭ ಹಾರೈಸಿದ ರಿಷಬ್ ಶೆಟ್ಟಿ

‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ (After operation london cafe) ಚಿತ್ರದ ಟೈಟಲ್ ನ್ನು (Movie title) ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸುವ ಮೂಲಕ ನಿರ್ದೇಶಕ ಸಡಗರ ರಾಘವೇಂದ್ರ ತಮ್ಮ ಮೊದಲನೆಯ ನಿರ್ದೇಶನದ ಸಡಗರಕ್ಕೆ ಗೆಳೆಯ ರಿಷಬ್ ಶೆಟ್ಟಿ (Rishab shetty) ಸಾಥ್ ನೀಡಿದ್ದಾರೆ.

ಈಗಾಗಲೇ ಸುದ್ಧಿಯಾಗಿರುವ ಕವೀಶ್ ಶೆಟ್ಟಿ (Kavish shetty) ಮತ್ತು ಮೇಘಾ ಶೆಟ್ಟಿ (Megha shetty) ಕಾಂಬಿನೇಷ್ ನ ಕನ್ನಡ(Kannada), ಮರಾಠಿ(Marathi), ಹಿಂದಿ(hindi), ತಮಿಳು(tamil), ತೆಲುಗು(Telugu), ಮಲಯಾಳಂ (Malayalamam) ಭಾಷೆಯ ಪ್ಯಾನ್ ಇಂಡಿಯಾ ಸಿನಿಮಾ ಬಹುತೇಕ ಚಿತ್ರೀಕರಣ ಮುಗಿಸಿದೆ. ಚಿತ್ರದ ಟೈಟಲ್ ಬಿಡುಗಡೆಯ ವಿಚಾರದಲ್ಲಿ ಮೊದಲಿನಿಂದಲೂ ಕುತೂಹಲ ಹುಟ್ಟಿಸಿದ್ದ ಚಿತ್ರ ತಂಡ ಕೊನೆಗೂ ನಾಯಕ ಕವೀಶ್ ಶೆಟ್ಟಿ ಹುಟ್ಟುಹಬ್ಬದ ಉಡುಗೊರೆಯಾಗಿ ಪ್ಯಾನ್ ಇಂಡಿಯಾ ಮಟ್ಟದ ಆಕರ್ಷಕ ಟೈಟಲ್ ಬಿಡುಗಡೆ ಮಾಡಿ ಚಿತ್ರದ ಬಗ್ಗೆ ಇನ್ನಷ್ಟೂ ಕುತೂಹಲ ಮೂಡಿಸಿದೆ.

‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಟೈಟಲ್ನಲ್ಲಿಯೇ ಇದೊಂದು ದೊಡ್ಡ ಮಟ್ಟದ ಆಕ್ಷನ್ ಪ್ಯಾಕೇಜ್ ಸಿನಿಮಾ ಎನ್ನುವುದನ್ನು ಸಾಬೀತು ಮಾಡಿದೆ. ಹಾಲಿವುಡ್ ಶೈಲಿಯ ಪೋಸ್ಟರ್ ನಲ್ಲಿರುವ ನಾಯಕ ಕವೀಶ್ ಶೆಟ್ಟಿ ಖದರ್ರು ಅದಕ್ಕೆ ಪುಷ್ಟಿ ನೀಡಿದೆ. ಇದನ್ನೂ ಓದಿ : – “ತುರ್ತು ನಿರ್ಗಮನ” ದ ಮೂಲಕ ಸುನೀಲ್ ರಾವ್ ರೀ ಎಂಟ್ರಿ.. ಚಿತ್ರದ ವಿಭಿನ್ನ ಟ್ರೇಲರ್ ಗೆ ಭಾರಿ ಮೆಚ್ಚುಗೆ

ನುರಿತ ತಾಂತ್ರಿಕ ವರ್ಗ ಹಾಗೂ ಕನ್ನಡ, ಮರಾಠಿ ಮತ್ತು ಬಹುಭಾಷಾ ಕಲಾವಿದರನ್ನು ಹೊಂದಿರುವ ಲಂಡನ್ ಕೆಫೆಯ ಗುಟ್ಟು ಬಿಟ್ಟು ಕೊಡದ ನಿರ್ದೇಶಕ ಸಡಗರ ರಾಘವೇಂದ್ರ ಹೆಸರಿಗೆ ತಕ್ಕಂತೆ ಚಿತ್ರ ಪ್ರೇಕ್ಷಕರ ನಿರೀಕ್ಷೆಯನ್ನು ನಿರಾಸೆಗೊಳಿಸುವುದಿಲ್ಲ ಎನ್ನುತ್ತಾ ಚಿತ್ರದ ಟೈಟಲ್ ಬಿಡುಗಡೆಗೆ ಸಹಕರಿಸಿದ ಗೆಳೆಯ ರೀಷಬ್ ಶೆಟ್ಟಿಗೆ ಕೃತಜ್ಞತೆಯನ್ನು ಸೂಚಿಸಿದ್ದಾರೆ.ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ ಮತ್ತು ಮರಾಠಿಯ ಹೆಸರಾಂತ ಡ್ರೀಮರ್ಸ್ ಪ್ರೊಡಕ್ಷನ್ ದೀಪಕ್ ರಾಣೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು. ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಹೊಂದಿದ್ದಾರೆ. ಇದನ್ನೂ ಓದಿ : – ವಿನೋದ್ ಪ್ರಭಾಕರ್ ಅಭಿನಯದ “ಲಂಕಾಸುರ” ಚಿತ್ರದ ಚಿತ್ರೀಕರಣ ಪೂರ್ಣ- ಸದ್ಯದಲ್ಲೇ ಟೀಸರ್ ಬಿಡುಗಡೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!