ನವದೆಹಲಿ: ತೀವ್ರ ಕುತೂಹಲ ಮೂಡಿಸಿದ ಪಂಚರಾಜ್ಯಗಳ ಚುನಾವಣೆಗೆ ಮುಹೂರ್ತನಿಗದಿಯಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭಾ ಚುನಾವಣೆಯ ದಿನಾಂಕಕ್ಕೆ ಮುಹೂರ್ತ ಫಿಕ್ಸ್ ಆಗಿದೆ.
ನವೆಂಬರ್ ಎರಡನೇ ವಾರದಿಂದ ಡಿಸೆಂಬರ್ ಮೊದಲ ವಾರದ ನಡುವೆ ಮತದಾನ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಇದೇ ತಿಂಗಳು 8 ಮತ್ತು 10 ರ ನಡುವೆ ಪ್ರಕಟಿಸುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
2018 ರಲ್ಲಿ ನಡೆದಂತಹ ಮಾದರಿಯಲ್ಲೇ ಚುನಾವಣೆ ನಡೆಸಲಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ ಮತ್ತು ತೆಲಂಗಾಣ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಆದರೆ ಛತ್ತೀಸ್‌ಗಢದಲ್ಲಿ, 2018 ರಲ್ಲಿ ನಡೆದ ಮತದಾನದಂತೆಯೇ ಎರಡು ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.