ನವದೆಹಲಿ : ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ ಎಂದು ಮಧ್ಯಂತರ ಬಜೆಟ್‌ನಲ್ಲಿ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕಳೆದ 10 ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ 28% ಹೆಚ್ಚಾಗಿದೆ. ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಕೋರ್ಸ್‌ಗಳಲ್ಲಿ ಹುಡುಗಿಯರು ಮತ್ತು ಮಹಿಳೆಯರು 43% ದಾಖಲಾತಿಯನ್ನು ಮಾಡುತ್ತಾರೆ.
ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ತಿಳಿಸಿದ್ದಾರೆ. ತ್ರಿವಳಿ ತಲಾಖ್ ನಿಷೇಧ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 70% ರಷ್ಟು ಮನೆಗಳು ಮಹಿಳೆಯರ ಘನತೆಯನ್ನು ಹೆಚ್ಚಿಸಿವೆ ಎಂದರು.