ಕೇರಳ : ಕೊಡಗು-ಕೇರಳ ಗಡಿಯಲ್ಲಿ ಪೊಲೀಸ್, ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ನಕ್ಸಲ್ (Naxal) ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.
ಘಟನಾ ಸ್ಥಳದಲ್ಲಿ ರಕ್ತದ ಕಲೆಗಳು ಪತ್ತೆಯಾಗಿದೆ. ಸ್ಥಳದಿಂದ ಮೂರು ರೈಫಲ್‌ಗಳು, ಒಂದು ಲ್ಯಾಪ್‌ಟಾಪ್, ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ಎಂಟು ಟೆಂಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆ ಬೆನ್ನಲ್ಲೆ ರಾಜ್ಯದ ನಕ್ಸಲ್ ನಿಗ್ರಹ ಪಡೆ ಕೂಂಬಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿದ್ದಾರೆ. ಎಲ್ಲೆಡೆ ಜಿಲ್ಲಾ ಪೊಲೀಸರು ಕಣ್ಣಿಟ್ಟಿದ್ದಾರೆ
ಅಷ್ಟೇ ಅಲ್ಲದೇ ಗಂಭೀರವಾಗಿ ಗಾಯಗೊಂಡ ನಕ್ಸಲ್ ಚಿಕಿತ್ಸೆಗಾಗಿ ಅಥವಾ ರಕ್ಷಣೆಗಾಗಿ ಕೊಡಗು ಜಿಲ್ಲೆಯನ್ನು ಪ್ರವೇಶಿಸುವ ಸಾಧ್ಯತೆಗಳಿರುವುದರಿಂದ ಜಿಲ್ಲಾ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.