National & International News

ಸಿಎಂ ಅರವಿಂದ್‌ ಕೇಜ್ರಿವಾಲ್‌ ಪತ್ನಿಗೆ ಹೈಕೋರ್ಟ್‌ ನಿಂದ ಬಿಗ್‌ ರಿಲೀಫ್‌

ನವದೆಹಲಿ: ಸಿಎಂ ಅರವಿಂದ್‌ ಕೇಜ್ರಿವಾಲ್‌ ಪತ್ನಿ ಸುನೀತಾಗೆ ದೆಹಲಿ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ತೀಸ್ ಹಜಾರಿ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್‌ ಗೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಫೆಬ್ರವರಿ 1 ರವರೆಗೂ ಮಧ್ಯಂತರ ತಡೆ ನೀಡಿದ್ದಾರೆ.

ಎರಡು ವಿಭಿನ್ನ ಕ್ಷೇತ್ರಗಳಿಗೆ ಮತದಾರರ ಪಟ್ಟಿಗೆ ಏಕಕಾಲದಲ್ಲಿ ಸೇರ್ಪಡೆಗೊಳ್ಳುವ ಮೂಲಕ 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನಾಯಕ ಹರೀಶ್ ಖುರಾನಾ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ತೀಸ್ ಹಜಾರಿ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಜಿಂದರ್ ಕೌರ್ ಅವರು ಆಗಸ್ಟ್ 29ರಂದು ಸಮನ್ಸ್ ಜಾರಿ ಮಾಡಿದ್ದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!