ಜಮ್ಮುಕಾಶ್ಮೀರ : ಜಮ್ಮುಕಾಶ್ಮೀರದ ರಜೌರಿ ಗುಂಡಿನ ದಾಳಿಗೆ 28ರ ಹರೆಯದ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರನಾಗಿದ್ದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಜಮ್ಮು ಕಾಶ್ಮೀರದ ರಜೌರಿಯಲ್ಲಿ (Rajouri) ನಡೆದ ಗುಂಡಿನ ಚಕಮಕಿಗೆ ಹುತಾತ್ಮರಾಗಿದ್ದಾರೆ.
ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಮಂಗಳೂರಿನಲ್ಲೇ ಹುಟ್ಟಿ ಬೆಳೆದಿದ್ದರು. ಇವರು ಎಂಆರ್ಪಿಎಲ್ ಡೆಲ್ಲಿ ಸ್ಕೂಲ್ ನಲ್ಲಿ ಹತ್ತನೇ ತರಗತಿವರೆಗೆ ವಿಧ್ಯಾಭ್ಯಾಸ ಮಾಡಿದ್ದರು. ನಂತರ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ರು. ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದುಕೊಂಡಿದ್ದರು.
ಎರಡು ವರ್ಷಗಳ ಹಿಂದೆಯಷ್ಟೇಪ ಪ್ರಾಂಜಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಪ್ರಾಂಜಲ್ ಓದಿದ್ದ ಎಂಆರ್ಪಿಎಲ್ ಡೆಲ್ಲಿ ಶಾಲೆಗೆ ಇಂದು ರಜೆ ಘೋಷಿಸಲಾಗಿದೆ.