ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ (Republic day) ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಸರ್ಕಾರದ ವತಿಯಿಂದ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಿದ್ದಾರೆ.
ಬಳ್ಳಾರಿ (Ballari) ಯ ವಿಮ್ಸ್ ಮೈದಾನದಲ್ಲಿ ಸಚಿವ ಶ್ರೀರಾಮುಲು (Sri ramulu) , ಮಡಿಕೇರಿ (Madikeri) ಯ ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಬಿ.ಸಿ.ನಾಗೇಶ್ (BC. nagesh) , ದೇವನಹಳ್ಳಿಯಲ್ಲಿ ಸಚಿವ ಡಾ.ಕೆ.ಸುಧಾಕರ್ (Sudhakar) ಚಾಮರಾಜನಗರದಲ್ಲಿ ಸಚಿವ ವಿ.ಸೋಮಣ್ಣ, ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಪ್ರಭು ಚೌಹಾಣ್, ಕೋಲಾರ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಮುನಿರತ್ನರಿಂದ ಧ್ವಜಾರೋಹಣ ನೆರವೇರಿದೆ. ಇದನ್ನು ಓದಿ :- ದೇಶದ ಜನತೆಗೆ 74ನೇ ಗಣರಾಜ್ಯೋತ್ಸವ ಶುಭಾಶಯ ಕೋರಿದ ಪ್ರಧಾನಿ ಮೋದಿ
ಯಾದಗಿರಿ (Yadagiri) ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಪ್ರಭು ಚೌಹಾಣ್, ವಿಜಯಪುರ (Vijayapura) ದಲ್ಲಿ ಡಿಸಿ ವಿಜಯಮಹಾಂತೇಶ ದಾನಮ್ಮನವರ್, ಕಾರವಾರದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಕಲಬುರಗಿಯಲ್ಲಿ ಸಚಿವ ಮುರುಗೇಶ್ ನಿರಾಣಿ, ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಗೋಪಾಲಯ್ಯ, ಗದಗ ನಗರದಲ್ಲಿ ಸಚಿವ ಸಿ.ಸಿ.ಪಾಟೀಲ್, ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಆನಂದ್ ಸಿಂಗ್, ಹಾವೇರಿಯಲ್ಲಿ ಸಚಿವ ಶಿವರಾಮ್ ಹೆಬ್ಬಾರ್, ದಾವಣಗೆರೆಯಲ್ಲಿ ಸಚಿವ ಭೈರತಿ ಬಸವರಾಜ್, ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವ ನಾರಾಯಣಗೌಡ, ತುಮಕೂರಿನಲ್ಲಿ ಸಚಿವ ಆರಗ ಜ್ಞಾನೇಂದ್ರ ಧ್ವಜಾರೋಹಣ ನೆರವೇರಿಸಿದ್ದಾರೆ.
https://youtu.be/VX_BYEs-5Lo
ಇದನ್ನು ಓದಿ :- ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ ಪ್ರಧಾನಿ