National & International News

ನಿರ್ಮಲಾ ಸೀತಾರಾಮನ್ʼಗೆ ಸಿಹಿ ತಿನ್ನಿಸಿದ ರಾಷ್ಟ್ರಪತಿ ಮುರ್ಮು

ನವದೆಹಲಿ : ಕೇಂದ್ರ ಸಚಿವ ರಾವ್ ಇಂದರ್​ಜಿತ್​ ಅವರು ಸಂಸತ್ತಿಗೆ ಆಗಮಿಸಿದ್ದು, ಈ ಬಜೆಟ್​ ಪ್ರಗತಿಪರವಾಗಿದ್ದು, ದೇಶದ ಅಭಿವೃದ್ಧಿಗಾಗಿಯೇ ಎಂದು ಹೇಳಿದ್ದಾರೆ. ಇನ್ನೂ ವೇಳೆ ನಿರ್ಮಲಾ ಸೀತಾರಾಮನ್ʼ​ಗೆ ರಾಷ್ಟ್ರಪತಿ ಮುರ್ಮು ಸಿಹಿ ತಿನ್ನಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್‌ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಹಾಗೆಯೇ ಪ್ರಧಾನಿ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್‌ ಕೂಡ ಇದಾಗಿರಲಿದೆ.

ಲೋಕಸಭೆ ಚುನಾವಣೆಯ ನಂತರ ಸರ್ಕಾರ ರಚನೆಯಾಗುವವರೆಗೆ ಮಧ್ಯಂತರ ಬಜೆಟ್ ಮಧ್ಯಂತರ ಅವಧಿಯ ಹಣಕಾಸಿನ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಹೊಸ ಸರ್ಕಾರದಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!