ನವದೆಹಲಿ : ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಅಭಿಷೇಕ್ ಕುಮಾರ್ ಎಂಬ ಪತ್ರಕರ್ತ ವೈರಲ್ ಮಾಡಿದ ಬೆನ್ನಲ್ಲೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಪ್ರತಿಕ್ರಿಯಿಸಿದ್ದು, ʼಇಂಥ ಅಪಾಯಕಾರಿ ಮತ್ತು ಹಾನಿಕಾರಕ ತಪ್ಪು ಮಾಹಿತಿಗಳನ್ನು ಈ ವೇದಿಕೆಗಳ ಮೂಲಕ ಎದುರಿಸಬೇಕಾಗಿದೆʼ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಇದು ನಟಿ ಝರಾ ಪಟೇಲ್ ಅವರ ವೀಡಿಯೊ ಆಗಿದ್ದು, ಅಕ್ಟೋಬರ್ 9ರಂದು ಅಪ್‌ಲೋಡ್ ಮಾಡಲಾಗಿತ್ತು. ಅದಕ್ಕೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಜೋಡಿಸಿ ವ್ಯತ್ಯಾಸವೇ ಕಾಣದಂತೆ ವಿಡಿಯೋ ಮಾಡಿ ಪೋಸ್ಟ್ ಮಾಡಲಾಗಿದೆ.
ಝರಾ ಪಟೇಲ್ ಬ್ರಿಟಿಷ್ ಇಂಡಿಯನ್ ಪ್ರಜೆಯಾಗಿದ್ದು, Instagramನಲ್ಲಿ 4.15 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.