ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬಿಸಿಲಿನಿಂದ ತತ್ತರಿಸಿ ಜನರಿಗೆ ಇದೀಗ ಮಳೆರಾಯ ತಂಪೆರೆದಿದೆ. ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಗೆ ಆರ್ಭಟಕ್ಕೆ ರಸ್ತೆಗಳು ಜಲಾವೃತಗೊಂಡಿದ್ದು, ನೋಯ್ಡಾದಲ್ಲಿ ಶಾಲೆಗಳು ಬಂದ್ ಆಗಿದೆ ಎಂದು ವರದಿಯಾಗಿದೆ.
ಇಂದು ದೆಹಲಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಟ್ವಿಟರ್ನಲ್ಲಿ ಹಂಚಿಕೊಳ್ಳಲಾದ ದೃಶ್ಯಗಳು ನೋಯ್ಡಾದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ ಎಂದು ತೋರಿಸಿದೆ.
ದೆಹಲಿ, ಎನ್ಸಿಆರ್ ಮತ್ತು ಇತರ ಸ್ಥಳಗಳ ಪ್ರತ್ಯೇಕ ಸ್ಥಳಗಳಲ್ಲಿ ಮತ್ತು ಪಕ್ಕದ ಪ್ರದೇಶಗಳಲ್ಲಿ ಗುಡುಗು ಸಹಿತ ಮಧ್ಯಮ ತೀವ್ರತೆಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎನ್ಸಿಆರ್ನಲ್ಲಿ ಭಾರಿ ಮಳೆ ಅವಾಂತರಕ್ಕೆ ಹಲವು ಪ್ರದೇಶಗಳಲ್ಲಿ ನಿಂತಲ್ಲೇ ನೀರು ನಿಂತಿದ್ದು, ನೋಯ್ಡಾ ಜಿಲ್ಲಾಡಳಿತವು ಈ ಪ್ರದೇಶದ ಎಲ್ಲಾ ಶಾಲೆಗಳನ್ನು ಬಂದ್ ಆಗಿದೆ ಎಂದು ಬುಧವಾರ ಘೋಷಿಸಿದೆ.