ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸ್ಪೈಸ್ ಜೆಟ್ ವಿಮಾನದ ಎಂಜಿನ್ ನಿರ್ವಹಣೆ ಕಾರ್ಯದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಘಟನಾ ಸ್ಥಳದಲ್ಲಿದ್ದ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ತಿಳಿದುಬಂದಿದೆ. ಸುಮಾರು 7:55ರ ಸಮಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಸ್ಪೈಸ್ ಜೆಟ್ ಗೆ ಸೇರಿದ ಕ್ಯೂ 400 ನ ನಂ 1 ಎಂಜಿನ್ ಡಿಇಎಲ್ ಟಿ 1ನಲ್ಲಿ ಬೇ 158 ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳನ್ನು ಕರೆಸಿ, ಬೆಂಕಿ ನಂದಿಸುವ ಕಾರ್ಯ ನಡೆಸಲಾಗಿದೆ ಎಂದು ವರದಿಯಾಗಿದೆ. ವಿಮಾನ ಮತ್ತು ನಿರ್ವಹಣಾ ಕಾರ್ಯಗಳನ್ನು ನೋಡಿಕೊಳ್ಳುವ ಸಿಬ್ಬಂದಿ ಸಂಪೂರ್ಣವಾಗಿ ಸುರಕ್ಷಿತರಾಗಿದ್ದಾರೆ.