ಮಣಿಪುರ : ಮಣಿಪುರ(Manipur)ದ ಬಿಷ್ಣುಪುರದ ಕ್ವಾಕ್ಟಾ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡಿನ ದಾಳಿ ನಡೆದಿದ್ದು, ಹಿಂಸಾಚಾರಕ್ಕೆ ಮೂವರು ಬಲಿಯಾಗಿರುವುದು ಬೆಳಕಿಗೆ ಬಂದಿದೆ.
ನಿನ್ನೆ ತಡರಾತ್ರಿ ಮತ್ತೆ ಮಣಿಪುರದಲ್ಲಿ ಹಿಂಸಾಚಾರಕ್ಕೆ ತಂದೆ-ಮಗ ಸೇರಿದಂತೆ ಮೂವರು ಜನ ಮೃತ ಪಟ್ಟಿದ್ದಾರೆಂದು ಸ್ಥಳೀಯರ ಪ್ರತ್ಯಕ್ಷದರ್ಶಿ ಮಾಹಿತಿ ನೀಡಿದ್ದಾರೆ. ಗುಂಡಿನ ದಾಳಿಯಲ್ಲಿ ತಂದೆ ಮತ್ತು ಮಗ, ಜತೆಗೆ ಪಕ್ಕದ ಮನೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮೇಲೆಯು ಗುಂಡು ಹಾರಿಸಲಾಗಿದೆ. ಇದರಿಂದ ಸ್ಥಳೀಯ ಜನರು ಭಯದಲ್ಲಿ ಜೀವನ ನಡೆಸುವಂತಾಗಿದೆ.