ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‍ನಲ್ಲಿ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮುಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಹಾಲನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಪೊಲೀಸರು ಸಂಜೆಯಿಂದಲೇ ಎನ್‍ಕೌಂಟರ್ ಪ್ರಾರಂಭಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೇ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಯುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ