ನವದೆಹಲಿ : ಜಿ20 ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ (Rishi Sunak) ಅವರು ಭಾನುವಾರ ಪತ್ನಿ ಅಕ್ಷತಾ ಮೂರ್ತಿಯವರೊಂದಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬ್ರಿಟನ್ ಪ್ರಧಾನಿಯಾದ ಬಳಿಕ ರಿಷಿ ಸುನಕ್ ಅವರು ಮೊದಲ ಬಾರಿಗೆ ಭಾರತಕ್ಕೆ ಅಧಿಕೃತವಾಗಿ ಭೇಟಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ದೇವಸ್ಥಾನದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಿಷಿ ಸುನಕ್ ನಾನೊಬ್ಬ ಹೆಮ್ಮೆಯ ಹಿಂದೂ ಎಂದು ಹೇಳಿದ್ದರು. ಅಲ್ಲದೇ ಹಲವು ದೇವಸ್ಥಾನಕ್ಕೆ ಭೇಟಿ ನೀಡುವುದಾಗಿಯೂ ತಿಳಿಸಿದ್ದರು.