ವಿಪಕ್ಷ ನಾಯಕ ಸಿದ್ದರಾಮಯ್ಯ, (SIDDARAMAIAH) ರಾಬಟ್ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಹಲವಾರು ಅಧಿಕಾರಿಗಳ ವಿರುದ್ಧ ವಿರುದ್ಧ ಲೋಕಾಯುಕ್ತಕ್ಕೆ 3728 ಪುಟಗಳ ದಾಖಲೆ ಸಮೇತ ದೂರುಗಳ ಸರಮಾಲೆಯನ್ನೇ ಸಲ್ಲಿಸಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ N.R ರಮೇಶ್,ಕಾಂಗ್ರೆಸ್ ಮುಖಂಡರ 10 ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ, ರಾಬರ್ಟ್ ವಾದ್ರಾ, ಮಾಜಿ ಸಚಿವರಾದ ಕೆ. ಜೆ. ಜಾರ್ಜ್, ಕೃಷ್ಣ ಭೈರೇಗೌಡ, ಯು. ಟಿ. ಖಾದರ್ , ಎಂ. ಬಿ. ಪಾಟೀಲ್, ಜಮೀರ್ ಅಹಮದ್, ದಿನೇಶ್ ಗುಂಡೂರಾವ್. ಎಂ. ಕೃಷ್ಣಪ್ಪ, ಎನ್, ಎ. ಹ್ಯಾರೀಸ್ ಹಾಗೂ ಪ್ರಿಯಾ ಕೃಷ್ಣ ಅವರುಗಳ ವಿರುದ್ಧ 10 ದೂರುಗಳನ್ನು ದಾಖಲಿಸಿದ್ದಾರೆ. ಅದೇ ರೀತಿ 9 ಹಿರಿಯ ಐಎಎಸ್ ಅಧಿಕಾರಿಗಳು, ಐದು ಕೆಎಎಸ್ ಅಧಿಕಾರಿಗಳು ಸೇರಿದಂತೆ 21 ಮಂದಿ ಅಧಿಕಾರಿಗಳ ವಿರುದ್ಧವೂ ಅವರು ದೂರು ದಾಖಲಿಸಿದ್ದಾರೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ 10 ವಿವಿಧ ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ, ಪ್ರತ್ಯೇಕವಾದ 10 ದೂರುಗಳನ್ನು ಒಂದೇ ಬಾರಿಗೆ ಲೋಕಾಯುಕ್ತದಲ್ಲಿ ದಾಖಲಿಸಲಾಗಿದೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ. ಇದನ್ನುಓದಿ :- ಬಿಜೆಪಿಗೆ ಸಂದೇಶ್ ನಾಗರಾಜ್ ರಾಜೀನಾಮೆ- ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
2013-2018 ರ ವರೆಗಿನ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ನಡೆದಿರುವ 10 ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ ಒಟ್ಟು 3,728 ಪುಟಗಳ ಸಂಪೂರ್ಣ ದಾಖಲೆಗಳ ಸಹಿತವಾಗಿ ಪ್ರತ್ಯೇಕವಾದ 10 ದೂರುಗಳನ್ನು ಒಂದೇ ಬಾರಿಗೆ ಲೋಕಾಯುಕ್ತದಲ್ಲಿ ದಾಖಲಿಸಿದ್ದಾರೆ.
ಈ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ, ಯು.ಟಿ. ಖಾದರ್, ಎಂ.ಬಿ.ಪಾಟೀಲ್, ಜಮೀರ್ ಅಹಮದ್, ದಿನೇಶ್ ಗುಂಡೂರಾವ್, ಎಂ. ಕೃಷ್ಣಪ್ಪ ಹಾಗೂ ಶಾಸಕರಾದ ಎನ್. ಎ. ಹ್ಯಾರೀಸ್, ಮಾಜಿ ಶಾಸಕ ಪ್ರಿಯಾ ಕೃಷ್ಣ ದೂರು ನೀಡಲಾಗಿದೆ. ಅದೇ ರೀತಿ, ಹಿರಿಯ ಐಎಎಸ್ ಅಧಿಕಾರಿಗಳಾದ ಪಾಂಡುರಂಗ ಬಿ. ನಾಯಕ್, ಜಿ.ಸತೀಶ್, ಅತುಲ್ ಕುಮಾರ್ ತಿವಾರಿ, ವಸ್ತ್ರದ್, ವಿ. ಶಂಕರ್, ಮನೋಜ್ ರಾಜನ್, ಹಾಗೂ ಡಾ.ಪಿ. ಬೋರೇಗೌಡ, ಡಾ.ಲೀಲಾ ಸಂಪಿಗೆ, ಚಲುವರಾಜು ಮತ್ತು ಕೃಷ್ಣಮೂರ್ತಿ ಅವರ ವಿರುದ್ಧವೂ ದೂರುಗಳು ದಾಖಲಾಗಿವೆ ಎಂದರು.
ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ವಿರುದ್ಧವೂ ಸಹ ಸರ್ಕಾರಿ ಭೂ ಕಬಳಿಕೆ ಪ್ರಕರಣದ ದೂರು ದಾಖಲಾಗಿದ್ದು, ರಾಬರ್ಟ್ ವಾದ್ರಾ ಪಾಲುದಾರಿಕೆಯ ಡಿಎಲ್ ಎಫ್ ಸಂಸ್ಥೆಯು ಬೆಂಗಳೂರು ದಕ್ಷಿಣ ತಾಲ್ಲೂಕು ತಾವರೆಕೆರೆ ಹೋಬಳಿ ಗಂಗೇನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 1 ರಿಂದ 99, ವರ್ತೂರು ಗ್ರಾಮದ ಸರ್ವೆ ನಂಬರ್ 7, 8, 9, 10, ವರ್ತೂರು ನರಸೀಪುರ ಗ್ರಾಮದ ಸರ್ವೆ ನಂಬರ್ 1 ರಿಂದ ೩೫.ಪೆದ್ದನಪಾಳ್ಯ ಗ್ರಾಮದ ಸರ್ವೆ ನಂಬರ್ 17, 18, 19, 20 ರಲ್ಲಿರುವ ಸುಮಾರು 9,600 ಕೋಟಿ ರೂಪಾಯಿಗಳಿಗೂ ಹೆಚ್ಚು ಬೆಲೆಬಾಳುವ 1,100 ಎಕರೆ ಸರ್ಕಾರಿ ಸ್ವತ್ತುಗಳನ್ನು ಕಬಳಿಸಿರುವ ಬೆಂಗಳೂರಿನ ಬೃಹತ್ ಭೂ ಕಬಳಿಕೆ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ರು.
ಇದನ್ನುಓದಿ :- ಚಿಕ್ಕಮಗಳೂರು- ಸಿ.ಟಿ.ರವಿ ವಿರುದ್ಧ ಕಣಕ್ಕಿಳಿಯುವಂತೆ ಸಿದ್ದರಾಮಯ್ಯಗೆ ಆಹ್ವಾನ ನೀಡಿದ ಅಭಿಮಾನಿ