Political NewsState News

ಮಹಿಳೆಯರ ಪರವಾದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಾಗಿದೆ – ಲಕ್ಷ್ಮೀ ಹೆಬ್ಬಾಳ್ಕರ್

ಮೂರು ತಿಂಗಳು ಕೆಟ್ಟದನ್ನ ನೋಡಲ್ಲ, ಕೆಟ್ಟದನ್ನ ಕೇಳಲ್ಲ, ಕೆಟ್ಟದನ್ನ ಮಾಡಲ್ಲ . ಈ ಬಾರಿ ತಾಳ್ಮೆಯಿಂದ ಚುನಾವಣೆ ಮಾಡಬೇಕೆಂದು ಅಂದುಕೊಂಡಿದ್ದೇನೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಮೂರು ತಿಂಗಳು ಕೆಟ್ಟದನ್ನ ನೋಡಲ್ಲ, ಕೆಟ್ಟದನ್ನ ಕೇಳಲ್ಲ, ಕೆಟ್ಟದನ್ನ ಮಾಡಲ್ಲ . ಈ ಬಾರಿ ತಾಳ್ಮೆಯಿಂದ ಚುನಾವಣೆ ಮಾಡಬೇಕೆಂದು ಅಂದುಕೊಂಡಿದ್ದೇನೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi hebbalker) ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ರಾಜಕಾರಣದಲ್ಲಿ ಮಹಿಳೆಯರಿಗೆ ಬಹಳ ಕಷ್ಟ.

Explained: How the Congress president is elected | Deccan Herald

ಹಂತ ಹಂತದಲ್ಲಿ ನಾವು ಅಗ್ನಿ ಪರೀಕ್ಷೆ ಎದುರಿಸಬೇಕು. ಆ ಸೀತಾ ಮಾತೆ ಕೂಡ ಅಗ್ನಿ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್ ಯಾವ ಲೆಕ್ಕ. ಮಹಿಳೆ ಅಂದರೆ ಸಂಘರ್ಷ, ಅದು ಮಹಿಳೆ ಜೊತೆಯೇ ಬರುತ್ತೆ. ಹುಟ್ಟಿನಿಂದ ಸಾಯುವವರೆಗೂ ಪರೀಕ್ಷೆಗಳನ್ನ ಹೊತ್ತುಕೊಂಡೇ ಇರಬೇಕು ಎದುರಿಸಬೇಕು, ಪಾಸಾಗಬೇಕು . ನಾನು ಮಾಡಿದ ಅಭಿವೃದ್ಧಿ ಕೆಲಸದಿಂದ ಚುನಾವಣೆಯಲ್ಲಿ ಗೆಲ್ಲಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿದೆ. ಮಹಿಳೆಯರ ಪರವಾದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಾಗಿದೆ. ಹಾಗಾಗಿ 3 ತಿಂಗಳು ಬಹಳ ತಾಳ್ಮೆಯಿಂದ ಇರಲು ಬಯಸುತ್ತೇನೆ ಎಂದು ಹೇಳಿದರು. ಇದನ್ನುಓದಿ :-  ಬಿಎಸ್ ವೈ ಬಗ್ಗೆ ನನಗೆ ಅಪಾರವಾದ ಗೌರವವಿದೆ, ಅನುಕಂಪವಿದೆ – ಸಿದ್ದರಾಮಯ್ಯ

CM Kumaraswamy may recast Karnataka ministry to wriggle out of mess - The Economic Times

ಇದೇ ವೇಳೆ ಕುಮಾರಸ್ವಾಮಿ (Kumaraswamy) ಹೇಳಿಕೆ ನಾನು ಕೇಳಿಲ್ಲ. ಕುಮಾರಸ್ವಾಮಿ ಅಣ್ಣನ ಬಗ್ಗೆ ತುಂಬಾ ಗೌರವ ಇದೆ. ಅವರು ಯಾವ ಮೂಲದಿಂದ ಹೇಳಿದ್ದಾರೆ ಗೊತ್ತಿಲ್ಲ, ಅದಕ್ಕೆ ನಾನು ಪ್ರತಿಕ್ರಿಯೇ ನೀಡುವುದು ಸರಿಯಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇದನ್ನುಓದಿ :- ಆರ್ಕಿಡ್ ಶಾಲೆ ಅವಾಂತರ – 500 ಶಾಲೆಗಳಿಗೆ ನೋಟಿಸ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!