ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ (Congress) ನಿಯೋಗ ದೂರು ನೀಡಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ (Ramalingareddy) , ಮಾಜಿ ಸಂಸದ ವಿಎಸ್ ಉಗ್ರಪ್ಪ (VS.Ugrappa) , ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ನಿಯೋಗ ದೂರು ಸಲ್ಲಿಸಿದೆ. ಬಿಜೆಪಿಯ ಚುನಾವಣಾ ಅಕ್ರಮಗಳ ಕುರಿತು ಕೈ ಪಡೆ ದೂರು ನೀಡಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ಕಾಂಗ್ರೆಸ್ ಅಸ್ತ್ರ ಮಾಡಿಕೊಂಡಿದೆ. ಪ್ರತಿಯೊಬ್ಬ ಮತದಾರನಿಗೆ 6 ಸಾವಿರ ನೀಡಿ ಮತ ಕೇಳಲಾಗುವುದು ಎಂದು ರಮೇಶ್ ಜಾರಕಿಹೊಳಿ (Ramesh jarakiholi) ಹೇಳಿದ್ದರು. ಇದೀಗ ಇದೆ ಹೇಳಿಕೆಯನ್ನು ಅಸ್ತ್ರಮಾಡಿಕೊಂಡು ಕೈ ಕಲಿಗಳು ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ. ರಾಜ್ಯದ ಐದು ಕೋಟಿ ಮತದಾರರನ್ನು 30 ಸಾವಿರ ಕೋಟಿಗೆ ಖರೀದಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಇದನ್ನು ಓದಿ :- ಹವಾಮಾನ ವೈಪರೀತ್ಯ – ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು
ಈ ಸಂಚಿಗೆ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರೇರಣೆ ನೀಡಿದ್ದಾರೆ. ಹಾಗಾಗಿ ಕೂಡಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಯಬೇಕು ಎಂದು ಕೈ ನಾಯಕರು ಒತ್ತಾಯಿಸಿದ್ದಾರೆ.
ಇದನ್ನು ಓದಿ :- ಕೊಪ್ಪಳ ಜಿಲ್ಲೆಗೆ ಎಂಟ್ರಿಯಾದ ಜೆಡಿಎಸ್ ಪಂಚರತ್ನ ರಥಯಾತ್ರೆ – ನಮ್ಮ ಪಕ್ಷಕ್ಕೆ ಒಂದು ಅವಕಾಶ ಕೊಡಿ ಎಂದ ಹೆಚ್ಡಿಕೆ