ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕ್ಷೇತ್ರ ಯಾವುದು ಎಂದು ಬಹಳ ಕೂತುಹಲ ಮೂಡಿತ್ತು. ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಬೇಡ ಎಂದು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕಿವಿ ಮಾತ ಹೇಳಿದ್ರು ಇದಕ್ಕೆ ಸಿದ್ದರಾಮಯ್ಯ ಅವರು ಒಪ್ಪಿ ಕೊಂಡು ಬೇರೆ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ರು. ಈ ಹಿನ್ನೆಲೆ ಇಂದು ಬಂದ ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದ ಟಿಕೇಟ್ ಕೊಡಲಾಗಿದೆ. ಈ ಮೂಲಕ ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರ ಸೇಪ್ ಅಲ್ಲಾ ಎಂಬುದು ಪಕ್ಷದವರೇ ಸ್ವಪಕ್ಷದವರೇ ಬಹಿರಂಗ ಪಡಿಸಿದ್ದಾರೆ. ಇನ್ನೂ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡಿ ಎಂದು ಕೂಡಾ ಎಐಸಿಸಿ ನಾಯಕರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.
ಆದ್ದರಿಂದ ಕೋಲಾರ, ವರುಣಾ ಈ ಎರಡು ಕ್ಷೇತಗಳಿಂದ ಸ್ಪರ್ಧೆ ಮಾಡುತ್ತಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇನ್ನೂ ಪುತ್ರ ಸಿದ್ದರಾಮಯ್ಯ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಅವಕಾಶ ಕೊಟ್ಟು ಅವರನ್ನ ಗೆಲ್ಲಿಸುಂತ ಪ್ರಯತ್ನ ಮಾಡೋಣ ಎಂದು ಕೈ ಎಐಸಿಸಿ ನಾಯಕರು ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ಮೊದಲ ಪಟ್ಟಿ ಬಿಡುಗಡೆ ಆಗಿದೆ. ಒಂದೆ ಹೆಸರು, ಗೊಂದಲ ಇಲ್ಲದ ಕ್ಷೇತ್ರ ಬಿಡುಗಡೆ ಆಗಿದೆ. ಸ್ಕ್ರೀನಿಂಗ್ ಹಾಗೂ ಸಿಇಸಿ ಸಭೆಯಲ್ಲಿ ಚರ್ಚೆಗಿತ್ತು. ಹೈಕಮಾಂಡ್ ವರುಣಾದಲ್ಲಿ ನಿಲ್ಲಿ ಅಂದಿದ್ದಾರೆ. ನಾನು ಕೋಲಾರ ಕೂಡ ಕೇಳಿದ್ದೇನೆ. ಆದ್ರೆ ಹೈಕಮಾಂಡ್ ನಿರ್ಧಾರ ಅಂತಿಮ ಎಂದು ಹೇಳಿದರು.